ಅ.3ರಂದು ಪ್ರತಿನಿಧಿಗಳ ನೇಮಕಾತಿಗಾಗಿ ನೇರ ಸಂದರ್ಶನ: ಮಂಡ್ಯ ಜಿಲ್ಲೆಯವರಿಗೆ ಮಾತ್ರ ಅವಕಾಶ

job
Published on

ಮಂಡ್ಯ: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳ ನೇಮಕಾತಿಗಾಗಿ ಆ.3ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ವಾಸವಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮಾಹಿತಿಗಾಗಿ ಅಂಚೆ ವಿಮಾ ಅಧಿಕಾರಿ ನಾಗರಾಜ್ ಮೊ.ಸಂ 9483658775 ಯನ್ನು ಸಂಪರ್ಕಿಸಬಹುದು ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ ಮಳವಳ್ಳಿ ಪುರಸಭೆಗೆ ಮೂವರು ತಾಂತ್ರಿಕ ಕೌಶಲವುಳ್ಳ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಜು.30ರೊಳಗೆ ಮಳವಳ್ಳಿ ಪುರಸಭೆ ಕಚೇರಿ ಸಿಬ್ಬಂದಿ ಶಾಖೆಯ ವಿಷಯ ನಿರ್ವಾಹಕರಿಗೆ ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುವುದು ಹಾಗೂ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net