ಬೃಹತ್ ಉದ್ಯೋಗ ಮೇಳ

Untitled
Published on

ಧಾರವಾಡ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹುಬ್ಬಳ್ಳಿ ಹಾಗೂ ನೆಹರು ಬಿ.ಬಿ.ಎ ಮತ್ತು ಬಿ.ಸಿ.ಎ ಕಾಲೇಜು ಆಶ್ರಯದಲ್ಲಿ ಅ. 7ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಬೃಹತ್ ಉದ್ಯೋಗ ಮೇಳವನ್ನು ಹುಬ್ಬಳ್ಳಿಯ ಘಂಟಿಕೇರಿಯ ನೆಹರು ಬಿ.ಬಿ.ಎ ಮತ್ತು ಬಿ.ಸಿ.ಎ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಸುಮಾರು ೨೫ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ೧೮ರಿಂದ ೩೫ ವಯಸ್ಸಿನೊಳಗಿನವರು ಮೇಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರ, ಹುಬ್ಬಳ್ಳಿ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net