ನಾಳೆ(ಫೆ.28) ಮದ್ದೂರು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ: 60ಕ್ಕೂ ಹೆಚ್ಚು ಕಂಪನಿ, 3000ಕ್ಕೂ ಹೆಚ್ಚು ಉದ್ಯೋಗಾವಕಾಶ

DSC_0006
Published on

ಮಂಡ್ಯ: ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಶ್ರೀನಿಧಿಗೌಡ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ಫೆ.28 ರಂದು ಮದ್ದೂರು ಪಟ್ಟಣದ ಗ್ಲೋಬಲ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಹೂತಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಮಹೇಂದ್ರ ಕುಮಾರ್ ತಿಳಿಸಿದರು.  ಈ ಉದ್ಯೋಗ ಮೇಳಕ್ಕೆ ಬೆಂಗಳೂರು ಹಾಗೂ ಮೈಸೂರಿನ 60ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಾದ ಐಸಿಐಸಿಐ ಬ್ಯಾಂಕ್, ಅಕ್ಸೆಂಚರ್, ಟಾಟಾ ಮೋಟಾರ್ಸ್ ರೆನಾಲ್ಟ್, ಟೊಯೋಟಾ ಕಿರ್ಲೋಸರ್, ಟಾಟಾ ಮೋಟರ್ಸ್, ಕ್ಯಾಪ್ ಜೆಮಿನಿ, ವಿಪ್ರೋ ಸೇರಿದಂತೆ ಹಲವು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಈ ಉದ್ಯೋಗ ಮೇಳದಲ್ಲಿ 3000ಕ್ಕೂ ಹೆಚ್ಚು ಯುವಕ ಯುವತಿಯರಿಗೆ ಉದ್ಯೋಗ ಸಿಗುವ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೊ, ಬಿಇ ಹಾಗೂ ಯಾವುದೇ ಪದವೀಧರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್‌ ಹಾಗೂ ವಿವರದ ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕೆ.ಶೆಟ್ಟಹಳ್ಳಿ ಮಾಜಿ ಗ್ರಾಂ.ಪಂ. ಅಧ್ಯಕ್ಷ ಹನುಮಂತೇಗೌಡ, ವಿಎಸ್ಎಸ್ಎನ್ ಅಧ್ಯಕ್ಷ ಜಿ.ಬಿ.ಕೃಷ್ಣ, ಶಂಕರೇಗೌಡ, ವೆಂಕಟೇಶ, ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net