

ಮೈಸೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ಮನರ್ವಸತಿ ಕಾರ್ಯಕ್ರಮದಡಿಯಲ್ಲಿ ಮೈಸೂರು ತಾಲ್ಲೂಕಿನ ಬೀರಿಹುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6000 ರೂ. ಗಳ ಗೌರವಧನದ ಆಧಾರದ ಮೇರೆಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಸ್ಥಳೀಯ ಸಮರ್ಥ ವಿಕಲಚೇತನ ವ್ಯಕ್ತಿಗಳು ಅರ್ಜಿ ನಮೂನೆಗಳನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಯಲ್ಲಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ಪಡೆದು ಅ.3 ರೊಳಗಾಗಿ ಸಲ್ಲಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಮೈಸೂರು ತಾಲ್ಲೂಕು ಮೊ. ಸಂ:6360483829 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್.ಮಾಲಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.