

ಮೈಸೂರು: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಒಟ್ಟು 17 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಎಂದರೆ ಕನ್ನಡದಲ್ಲಿ ಸೂಕ್ತವಾಗಿ ಓದಲು, ಬರೆಯಲು ಮತ್ತು ಸೂಕ್ತವಾಗಿ ವ್ಯವಹರಿಸುವ ಜ್ಞಾನ ಅವಶ್ಯ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಮೀಸಲು ಅನ್ವಯವಾಗುವವರಿಗೆ ವಯೋ ಸಡಿಲಿಕೆ ಇದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ. ಪ್ರವರ್ಗ 2ಎ, 2ಬಿ ಅಭ್ಯರ್ಥಿಗಳಿಗೆ 150 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆರ್ಥಿಕವಾಗಿ ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರು ಮತ್ತು ಸೇನೆಯಲ್ಲಿ ಕೆಲಸ ನಿರ್ವಹಿಸಿದವರಿಗೆ ಅರ್ಜಿ ಶುಲ್ಕ ಇಲ್ಲ. ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಶುಲ್ಕ ಸಲ್ಲಿಸಬೇಕು. ಏಪ್ರಿಲ್ 1ರಿಂದ 30ರ ವರೆಗೆ ಅರ್ಜಿ ಸಲ್ಲಿಸಬಹುದು.
https://districts.ecourts.gov.in/mysuru-onlinerecruitment ಅಥವಾ karnatakajudiciary.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.