ಅಂಗವಿಕಲರಿಗೆ ಉದ್ಯೋಗಮೇಳ 26ಕ್ಕೆ

PRESS MEET
Published on

ಹುಬ್ಬಳ್ಳಿ : ಧಾರವಾಡದ ಸಮರ್ಥನಂ ಸಂಸ್ಥೆಯ ಆಶ್ರಯದಲ್ಲಿ ಅಂಗವಿಕಲರಿಗಾಗಿ ಆ. 26ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಸ್ಥೆಯ ಬಿಪಿಒ ಹರ್ಷಾ ಸರಾಫ್, ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 500 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಅಂಗವಿಕಲರು ಹಾಗೂ ಇತರ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸುವುದು ಈ ಮೇಳದ ಮುಖ್ಯ ಉದ್ದೇಶ. ಎಸ್​ಎಸ್​ಎಲ್​ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಶಿಕ್ಷಣ ಪೂರೈಸಿದವರು ಪಾಲ್ಗೊಳ್ಳಬಹುದು. ಸ್ವಂತ ಉದ್ಯೋಗ ಪ್ರಾರಂಭಿಸಲು ಇಚ್ಛಿಸುವವರಿಗೆ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ಆಸಕ್ತರು ಸ್ವ ವಿವರ, ಪ್ರಮಾಣ ಪತ್ರ, ಪಾಸ್​ಪೋರ್ಟ್ ಅಳತೆಯ ಫೋಟೊ, ಅಂಗವಿಕಲತೆಯ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ತರಬೇಕು ಎಂದು ತಿಳಿಸಿದರು.

ಸಂಸ್ಥೆಯ ಟ್ರಸ್ಟಿ ಉದಯಕುಮಾರ ಬಾಬುನವರ, ಕೇಂದ್ರದ ಮುಖ್ಯಸ್ಥ ಕೃಷ್ಣಪ್ಪ ಲಮಾಣಿ, ಮಾನವ ಸಂಪನ್ಮೂಲ ಮುಖ್ಯಸ್ಥ ಶಿವಲಿಂಗಯ್ಯ ಚೌಕಿಮಠ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net