’ಕೈ’ ಬಿಟ್ಟು ಬಿಜೆಪಿ ಸೇರಿದ ನಗರಸಭೆ ಸದಸ್ಯ

mla
ಬಿಜೆಪಿ ಸೇರ್ಪಡೆ
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕನಕದಾಸ ನಗರದ ನಗರಸಭೆ ಸದಸ್ಯ ಶಿವರಾಜು ಶಾಸಕ ಧೀರಜ್ ಮುನಿರಾಜು ಸಮ್ಮುಖದಲ್ಲಿ ಮರಳಿ ಬಿಜೆಪಿ ಸೇರ್ಪಡೆಯಾದರು.
ನಗರಸಭೆ ಸದಸ್ಯ ಶಿವರಾಜು ಮಾತನಾಡಿ, ಭಾರತೀಯ ಜನತಾ ಪಕ್ಷದ ಸಿದ್ಧಾಂತ ಮತ್ತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಕಾರ್ಯವೈಖರಿ ಮೆಚ್ಚಿ ಮರಳಿ ಬಿಜೆಪಿ ಪಕ್ಷಕ್ಕೆ ಬೆಂಬಲಿಗರೊಂದಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ಮೂಲತಃ ಬಿಜೆಪಿಯಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಶಿವರಾಜು ಕಳೆದ ವಿಧಾನಸಭೆ ಚುನಾವಣೆ ವೇಳೆ ತಪ್ಪು ನಿರ್ಧಾರ ತೆಗೆದುಕೊಂಡು ಪಕ್ಷ ತೊರೆದಿದ್ದರು. ಕಾಂಗ್ರೆಸ್‌ನಲ್ಲಿ ಯುವಕರಿಗೆ ಆದ್ಯತೆ ಇಲ್ಲ ಎಂಬುದನ್ನ ಅರಿತುಕೊಂಡು ಮರಳಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸ್ವಾಗತರ್ಹ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net