

ಹರಪನಹಳ್ಳಿ: ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಭರದಿಂದ ಸಾಗಿದ್ದು, ತಾಲೂಕಿನಲ್ಲಿ ಚುರುಕುಗೊಳಿಸುವ ಅಗತ್ಯವಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ತಿಳಿಸಿದರು.
ತಾಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಬುಧವಾರ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ಮೋದಿಯವರ ಯೋಗ್ಯ ನೇತೃತ್ವದಿಂದ ಬಿಜೆಪಿಗೆ ಗೌರವ ಹೆಚ್ಚಾಗಿದೆ. ತಾಲೂಕಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಕೈ ಜೋಡಿಸಬೇಕು ಎಂದರು.