ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈ ಜೋಡಿಸಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈ ಜೋಡಿಸಿ
Published on

ಎಚ್.ಡಿ. ಕೋಟೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸ್ಥಳೀಯರು ಕೈಜೋಡಿಸಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಕರೆ ನೀಡಿದರು.
ಯರಹಳ್ಳಿ ಹ್ಯಾಂಡ್‌ಪೋಸ್ಟ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಕೆನರಾ ರೊಬ್ಯಾಕೋ ಮ್ಯುಚ್ಯುವಲ್ ಫಂಡ್ ವತಿಯಿಂದ ಸೈಕಲ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಾಧಕರನ್ನು ಪ್ರೇರಣೆಯಾಗಿ ತೆಗೆದುಕೊಂಡು ಸಾಧನೆ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ಕೆನರಾ ರೊಬ್ಯಾಕೋನ ಮೇನೇಜರ್ ಸುಮಂತ್ ಮಾತನಾಡಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೈಕಲ್ ವಿತರಿಸಲಾಗುತ್ತಿರುವುದಾಗಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಪುರಸಭಾ ಸದಸ್ಯ ಹರೀಶ್‌ಗೌಡ, ಮಂಜುನಾಥ್, ಪ್ರೇಂ ಸಾಗರ್, ನವೀನ್ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ಶಿವಪ್ಪ, ಉಪಾಧ್ಯಕ್ಷ ಪುಟ್ಟಸ್ವಾಮಿ ರಾಜು, ರಮೇಶ್, ಸುರೇಶ್, ಮುಖ್ಯಶಿಕ್ಷಕ ವಿಶ್ವನಾಥ್, ನೌಕರರ ಸಂಘದ ಅಧ್ಯಕ್ಷ ಮಹದೇವು, ಮಹದೇವಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net