ಉತ್ತಮ ಪರಿಸರ ನಿರ್ಮಾಣಕ್ಕೆ ಕೈಜೋಡಿಸಿ

ದೇವದುರ್ಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಸುರೇಶ ಅಣ್ಣಪ್ಪ ಸವದಿ ಚಾಲನೆ ನೀಡಿದರು. ಪ್ರಥಮ ದರ್ಜೆ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್, ವಕೀಲರ ಸಂಘದ ತಾಲೂಕು ಅಧ್ಯಕ್ಷ ಸುಖಮುನಿರೆಡ್ಡಿ, ಸಿಪಿಐ ಗುಂಡೂರಾವ್, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಪ್ರಾದೇಶಿಕ ಅರಣ್ಯ ಅಧಿಕಾರಿ ಸುರೇಶ ಆಲಮೇಲು ಇತರರಿದ್ದರು.

Published on

ದೇವದುರ್ಗ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲೀನ್ಯವಾಗಲಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಪ್ಲಾಸ್ಟಿಕ್‌ಮುಕ್ತ ಅಭಿಯಾನಕ್ಕೆ ಯುವಕರು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸುರೇಶ ಅಣ್ಣಪ್ಪ ಸವದಿ ಹೇಳಿದರು.

ಪಟ್ಟಣದ ಹಿರೇದೇವತೆಮ್ಮ ದೇವಸ್ಥಾನ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀರ ಸಂಘ ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಹಾಗೂ ಪ್ಲಾಸ್ಟಿಕ್‌ಮುಕ್ತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಮಾತ್ರವಲ್ಲ ಆರೋಗ್ಯಕ್ಕೆ ತೊಂದರೆ ಉಂಟಾಗುತ್ತದೆ. ಪ್ಲಾಸ್ಟಿಕ್ ಕೊಳೆಯದೇ ಭೂಮಿ ಫಲವತ್ತತೆ ಕಳೆದುಕೊಂಡು ಮಣ್ಣಿನಲ್ಲಿರುವ ಸೂಕ್ಷ್ಮಾಣುಜೀವಿಗಳು ನಾಶವಾಗುತ್ತವೆ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಬೇಕು ಎಂದರು.

ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್ ಮಾತನಾಡಿ, ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಜೀವನದ ಅವಿಭಾಜ್ಯ ಅಂಗವಾಗಬೇಕು. ಪರಿಸರ ನಾಶದಿಂದ ಹವಾಮಾನದಲ್ಲಿ ಏರುಪೇರಾಗಿ ಅನಾರೋಗ್ಯಕ್ಕೆ ಕಾರಣವಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟರೆ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.

ಗ್ರೇಡ್-2 ತಹಸೀಲ್ದಾರ್ ಸತ್ಯಮ್ಮ, ವಕೀಲರ ಸಂಘದ ಅಧ್ಯಕ್ಷ ಸುಖಮುನಿರೆಡ್ಡಿ, ಸಿಪಿಐ ಗುಂಡೂರಾವ್, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಪ್ರಾದೇಶಿಕ ಅರಣ್ಯ ಅಧಿಕಾರಿ ಸುರೇಶ ಆಲಮೇಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಗಂಗಮ್ಮ, ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ, ಪ್ರಮುಖರಾದ ಬಸವರಾಜ, ಮಲ್ಲಿಕಾರ್ಜುನ್, ಮಹಮ್ಮದ್ ಸಾಲರ್, ವೀರೇಶ, ಆಂಜನೇಯ, ಭೀಮಮ್ಮ, ಬಸಣ್ಣ, ಮರಿಯಪ್ಪ ಪೂಜಾರಿ, ನಾಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net