ತಂಬಾಕು ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಿ

31-05-Shiva-4
ರಾಯಚೂರಿನ ಡಿಎಚ್‌ಒ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಸಿವಿಲ್ ನ್ಯಾಯಾೀಶ ಸಿದ್ಧರಾಮಪ್ಪ ಕಲ್ಯಾಣರಾವ್ ಚಾಲನೆ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಆರ್.ಶಿವಕುಮಾರ, ಡಿಎಚ್‌ಒ ಡಾ.ಸುರೇಂದ್ರಬಾಬು, ರಿಮ್ಸ್ ನಿರ್ದೇಶಕ ಡಾ.ರಮೇಶ, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಗಣೇಶ ಇದ್ದರು.
Published on

ರಾಯಚೂರು: ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಪ್ರತಿಯೊಬ್ಬರು ತಂಬಾಕು ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಿವಿಲ್ ನ್ಯಾಯಾೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಸಿದ್ಧರಾಮಪ್ಪ ಕಲ್ಯಾಣರಾವ್ ಹೇಳಿದರು.
ಸ್ಥಳೀಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು 37 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ ಎಂದರು.
ತಂಬಾಕು ಸೇವನೆಯಿಂದ ಬಾತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಪ್ರಸ್ತುತ ದಿನಮಾನದಲ್ಲಿ ಮಕ್ಕಳು ಮತ್ತು ಯುವಕರಲ್ಲಿ ಹೆಚ್ಚಾಗಿ ತಂಬಾಕು ಸೇವನೆ ಕಂಡು ಬರುತ್ತಿದೆ. ಅವರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು.
ತಂಬಾಕು ಸೇವನೆಯಿಂದ 20 ರೀತಿಯ ಕ್ಯಾನ್ಸರ್‌ಗಳು ಬರುತ್ತವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದ್ದು, ಅದನ್ನು ಬೇರು ಸಮೇತ ತೆಗೆದು ಹಾಕಲು ಎಲ್ಲರೂ ಪಣ ತೊಡಬೇಕಾಗಿದೆ. ಈ ನಿಟ್ಟಿನಲ್ಲಿ ತಂಬಾಕು ಸೇವನೆಯಿಂದ ದೂರವಾಗಬೇಕು ಎಂದು ಸಿದ್ಧರಾಮಪ್ಪ ಕಲ್ಯಾಣರಾವ್ ಹೇಳಿದರು.
ನಂತರ ಜಾಥಾ ನಗರದ ಪ್ರಮುಖ ಬೀದಿಗಳ ಮೂಲಕ ಪುನಃ ಡಿಎಚ್‌ಒ ಕಚೇರಿಗೆ ಬಂದು ತಲುಪಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಆರ್.ಶಿವಕುಮಾರ, ಡಿಎಚ್‌ಒ ಡಾ.ಸುರೇಂದ್ರಬಾಬು, ರಿಮ್ಸ್ ನಿರ್ದೇಶಕ ಡಾ.ರಮೇಶ, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಗಣೇಶ, ಮನೋರೋಗ ತಜ್ಞ ಡಾ.ಮನೋಹರ ಪತ್ತಾರ, ಆರ್‌ಸಿಎಚ್ ಅಕಾರಿ ಡಾ.ನಂದಿತಾ, ಕುಷ್ಠರೋಗ ನಿವಾರಣಾಕಾರಿ ಡಾ.ಯಶೋಧಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net