

ರಾಯಚೂರು: ಜಿಲ್ಲೆಯಲ್ಲಿ ಬಾಲ ಕಾರ್ಮಿಕತೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಜನರು ಇದಕ್ಕೆ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಹೇಳಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದಿಂದ ಬಾಲ ಕಾರ್ಮಿಕ ಯೋಜನೆಯಡಿ ಬಾಲ ಕಾರ್ಮಿಕತೆ ನಿರ್ಮೂಲನೆ ಕುರಿತು ಬುಧವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶಿಕ್ಷಣದಿಂದ ದೂರ ಉಳಿದು ಕಾರ್ಮಿಕತೆಯಲ್ಲಿ ತೊಡಗಿರುವ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಲು ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಮೀನು, ಹೋಟೆಲ್ ಸೇರಿದಂತೆ ವಿವಿಧೆಡೆ ದುಡಿಯುತ್ತಿರುವ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಾಲೆಗೆ ಮರಳಿ ಕೆಲಸವಾಗಬೇಕು. ಜನರೂ ಕೂಡಾ ಮಕ್ಕಳನ್ನು ದುಡಿಸಿಕೊಳ್ಳದೆ ಅವರನ್ನು ಶಾಲೆ ಹೋಗುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಲ ಕಾರ್ಮಿಕ, ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಕಾರ್ಮಿಕ ಅಕಾರಿ ಆರತಿ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಯೋಜನಾಕಾರಿ ಮಂಜುನಾಥ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.