ಮತದಾನ ಪ್ರಮಾಣ ಹೆಚ್ಚಿಸಲು ಕೈಜೋಡಿಸಿ

05-04-Shiva-3
ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಬೂತ್ ಮಟ್ಟದ ಅಕಾರಿಗಳ ಸಭೆಯಲ್ಲಿ ಶುಕ್ರವಾರ ತಹಸೀಲ್ದಾರ್ ಸುರೇಶ ವರ್ಮಾ ಮಾತನಾಡಿದರು. ತಾ.ಪಂ. ಕಾರ್ಯನಿರ್ವಾಹಕ ಅಕಾರಿ ಮಾನಪ್ಪ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿ, ಶಿಶು ಅಭಿವೃದ್ಧಿ ಅಕಾರಿಗಳಾದ ಮಂಜುನಾಥ, ಮಹೇಶ ನಾಯಕ, ದಂಡಪ್ಪ ಬಿರಾದರ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ಬೂತ್ ಮಟ್ಟದ ಅಕಾರಿಗಳು ಸ್ವೀಪ್ ಸಮಿತಿಯೊಂದಿಗೆ ಕೈಜೋಡಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಹಸೀಲ್ದಾರ್ ಸುರೇಶ ವರ್ಮಾ ಹೇಳಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಸಭಾಂಗಣದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೂತ್ ಮಟ್ಟದ ಅಕಾರಿಗಳ ಸಭೆಯಲ್ಲಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಶ್ರೇಷ್ಠವಾದ ಸ್ಥಾನವಿದೆ. ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಮಾಡುವುದು ಅಕಾರಿಗಳ ಕರ್ತವ್ಯವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇರದವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಬೇಕು.
ವೋಟರ್ಸ್‌ ಹೆಲ್ಪ್‌ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ತಿಳುವಳಿಕೆ ನೀಡಬೇಕು. ಮತದಾನದ ದಿನದಂದು ಅಕಾರಿಗಳು ಮತಗಟ್ಟೆಯಲ್ಲಿ ಶುದ್ಧ ಕುಡಿಯುವ ನೀರು, ನೆರವಳಿನ ವ್ಯವಸ್ಥೆ, ರ‌್ಯಾಂಪ್ ವ್ಯವಸ್ಥೆ ಮಾಡಬೇಕು ಎಂದು ಅಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಕಾರಿ ಮಾನಪ್ಪ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿ, ಶಿಶು ಅಭಿವೃದ್ಧಿ ಅಕಾರಿಗಳಾದ ಮಂಜುನಾಥ, ಮಹೇಶ ನಾಯಕ, ದಂಡಪ್ಪ ಬಿರಾದರ ಹಾಗೂ ಬೂತ್ ಮಟ್ಟದ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net