ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅಭಿಯಾನಕ್ಕೆ ಕೈಜೋಡಿಸಿ

30adarshkdga4
Published on

ಮಡಿಕೇರಿ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಮುಂದಿಟ್ಟುಕೊಂಡು ಅಭಿಯಾನ ನಡೆಸಲಾಗುತ್ತಿದ್ದು, ಈ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸುವಂತೆ ಕೊರವೇ ಅಧ್ಯಕ್ಷ ಅಚ್ಚಾಂಡಿರ ಪವನ್ ಪೆಮ್ಮಯ್ಯ ಮನವಿ ಮಾಡಿದರು.


ಚೆಂಬು ಗ್ರಾಮದಲ್ಲಿ ಆಯೋಜಿಸಿದ್ದ ಚೆಂಬು ಗ್ರಾಮದ ಕೊಡಗು ರಕ್ಷಣಾ ವೇದಿಕೆಯ ಹೊಂಬಾಳೆ ಮತ್ತು ಕಟ್ಟಪ್ಪಳ್ಳಿ ಘಟಕದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸಾ ವ್ಯವಸ್ಥೆಯಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಇದೆ. ಆದ್ದರಿಂದ ಅನಿವಾರ್ಯವಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಮುಂದಿಟ್ಟುಕೊಂಡು ಅಭಿಯಾನ ನಡೆಸಲಾಗುತ್ತಿದೆ. ಈ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.


ಹೊಂಬಾಳೆ ಘಟಕದ ಅಧ್ಯಕ್ಷ ಪ್ರಕಾಶ್ ಅತ್ಯಾಡಿರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.


ಸಭೆಯಲ್ಲಿ ಕೊರವೇ ಜಿಲ್ಲಾ ಕಾರ್ಯದರ್ಶಿ ಜಯಂತ್, ಗ್ರಾಮದ ಹಿರಿಯರಾದ ದೇವಂಗೋಡಿ ಅಚ್ಚಪ್ಪ, ದೇವಂಗೋಡಿ ತನು, ಸಂಪಾಜೆ ಹೋಬಳಿ ಘಟಕದ ಅಧ್ಯಕ್ಷ ಹೇಮಾದರ ಹೊಸೂರು, ಕುಡಿಯರ ಸತೀಶ್ ತೋರಿಮಲೆ ಮತ್ತಿತರ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net