ಪಕ್ಷ ಸಂಘಟನೆಗೆ ಸದಸ್ಯತ್ವ ಮಾಡಿ

15-kollegal-2,,,
ಕೊಳ್ಳೇಗಾಲ ಪಟ್ಟಣದ ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ನಿರಂಜನ್ ಕುಮಾರ್ ಮಾತನಾಡಿದರು. ಎನ್.ಮಹೇಶ್, ವೆಂಕಟೇಶ್, ನಿಶಾಂತ್, ಪರಮೇಶ್ವರಯ್ಯ ಇತರರು ಇದ್ದರು.
Published on

ಕೊಳ್ಳೇಗಾಲ : ಪಟ್ಟಣದ ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಭಾರತೀಯ ಜನತಾ ಪಾರ್ಟಿ ವತಿಯಿಂದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸದಸ್ಯತ್ವ ಅಭಿಯಾನ ಆಯೋಜಿಸಲಾಗಿತ್ತು.
ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 70 ಸಾವಿರದಷ್ಟು ಸದಸ್ಯತ್ವ ಅಭಿಯಾನ ನೋಂದಣಿ ಮಾಡಬೇಕು. ಈ ಮೂಲಕ ಮತದಾರರನ್ನು ಭೇಟಿ ಮಾಡಿ ನಮ್ಮ ಪ್ರಧಾನಮಂತ್ರಿಗಳ ಕಾರ್ಯಕ್ರಮಗಳನ್ನು ಮನದಟ್ಟು ಮಾಡಿ ಜನರಿಗೆ ತಿಳಿಸಬೇಕು. ಪಕ್ಷದ ಸಂಘಟನಾ ದೃಷ್ಟಿಯಿಂದ ಪ್ರತಿ ಬೂತ್ ನಲ್ಲಿ ಸದಸ್ಯತ್ವ ಮಾಡಬೇಕು ಎಂದು ಹೇಳಿದರು.
ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ನಮ್ಮ ಬಿಜೆಪಿ ರಾಜ್ಯಾಧ್ಯಕ್ಷರ ವಿಜಯೇಂದ್ರ ಅವರ ಸೂಚನೆಯಂತೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 2024 ರ ಸದಸ್ಯತ್ವ ಆಂದೋಲನಕ್ಕೆ ಇಂದು ಚಾಲನೆ ನೀಡಲಾಗಿದೆ. ಅದೇ ರೀತಿ ಕೊಳ್ಳೇಗಾಲ ನಗರಮಂಡಲದ ಎಲ್ಲ ವಾರ್ಡ್‌ಗಳಲ್ಲಿ ಸದಸ್ಯತ್ವ ನೋಂದಣಿ ಮಾಡಲು ಬೇಕಾಗಿರುವ ಎಲ್ಲ ಸಿದ್ಧತೆ ಮಾಡಲಾಗಿದೆ. ಈ ತಿಂಗಳೊಳಗೆ ಪ್ರತಿ ಬೂತ್ ಗಳಲ್ಲಿ 300 ರಿಂದ ಹೆಚ್ಚು ಸದಸ್ಯರನ್ನು ನೋಂದಣಿ ಮಾಡುವ ಮೂಲಕ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಲಕ್ಷ ಸದಸ್ಯತ್ವ ನೋಂದಣಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್, ಜಿಲ್ಲಾ ಒಬಿಸಿ ಅಧ್ಯಕ್ಷ ವೆಂಕಟೇಶ್, ಮುಖಂಡ ನಿಶಾಂತ್, ನಗರ ಮಂಡಲ ಅಧ್ಯಕ್ಷ ಪರಮೇಶ್ವರಯ್ಯ, ಜಿಲ್ಲಾ ಕಾರ್ಯದರ್ಶಿ ಬೂದಿತಿಟ್ಟು ಶಿವಕುಮಾರ್, ರಾಜಶೇಖರ್, ರಾಜು ಅಗರಣ ಆನಂದ್, ಲೋಕೇಶ್, ಸುರೇಶ್, ರವಿಕುಮಾರ್ ಹಾಗೂ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net