ಜೆಡಿಎಸ್‌ಗೆ ಕಾಂಗ್ರೆಸ್ ಮುಖಂಡರ ಸೇರ್ಪಡೆ

ಫೋಟೋ ಶೀರ್ಷಿಕೆ 07 ಸಿಆರ್_ಪಿ-2 ಎ.
Published on

ಮಡಿಕೇರಿ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿ ಗೌಡಗೆರೆ ಪಂಚಾಯತಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಮುಖಂಡರು ಬುಧವಾರ ಕಾಂಗ್ರೆಸ್ ತೊರೆದು ಶಾಸಕ ಸಿ.ಎನ್. ಬಾಲಕೃಷ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾದರು.


ತಾಲೂಕಿನ ಕಸಬಾ ಹೋಬಳಿ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಿದರು. ಈ ವೇಳೆ ಗೌಡಗೆರೆ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಕಾಶ್ ನೇತೃತ್ವದಲ್ಲಿ ಹಾಲಿ ಉಪಾಧ್ಯಕ್ಷ ನಟರಾಜ್, ಸದಸ್ಯರಾದ ಜಯಮ್ಮ, ರಂಗೇಗೌಡ, ವೀಣಾ, ಪ್ರಕಾಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕ ಬಾಲಕೃಷ್ಣ ಮಾತನಾಡಿ, ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯ, ನಮ್ಮ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾಳಜಿಯನ್ನು ಗಮನಿಸಿ ಕಾಂಗ್ರೆಸ್ ಪಕ್ಷದ 30ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರುವ ಮೂಲಕ ನಮಗೆ ಮತ್ತಷ್ಟು ಶಕ್ತಿ ತುಂಬಿದ್ದಾರೆ. ಎಲ್ಲರೂ ಸಹಬಾಳ್ವೆಯಿಂದ ಮುಂದೆ ಸಾಗಬೇಕಿದೆ. ಮುಖಂಡರು ಹಾಗೂ ಕಾರ್ಯಕರ್ತರ ನಂಬಿಕೆ ಮತ್ತು ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡು ಅಭಿವೃದ್ಧಿಗೆ ಕೆಲಸಗಳಿಗೆ ಒತ್ತು ನೀಡುತ್ತೇನೆ. ಇದಲ್ಲದೆ ಮುಂದಿನ ದಿನಗಳಲ್ಲಿ ಇನ್ನು ಹಲವು ಮುಖಂಡರು ಜೆಡಿಎಸ್ ಸೇರಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net