ಆ.21ರಂದು ನಾಗಮಂಗಲದಲ್ಲಿ ಬೃಹತ್ ಪ್ರತಿಭಟನೆ: ರಾಜ್ಯ ಒಕ್ಕಲಿಗರ ಒಕ್ಕೂಟದ ಜಂಟಿ ಕಾರ್ಯದರ್ಶಿ ಚಿನಕುರಳಿ ರಮೇಶ್ ಮಾಹಿತಿ

1
Published on

ಮಂಡ್ಯ: ಒಕ್ಕಲಿಗರ ಸಮುದಾಯದ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಎನ್.ಚಲುವರಾಯಸ್ವಾಮಿ ಅವರ ತೇಜೋವಧೆಗೆ ಪ್ರಯತ್ನಿಸುತ್ತಿರುವ ಪ್ರತಿಪಕ್ಷ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆ.21ರಂದು ನಾಗಮಂಗಲದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಜಂಟಿ ಕಾರ್ಯದರ್ಶಿ ಚಿನಕುರಳಿ ರಮೇಶ್ ತಿಳಿಸಿದರು.

ಉಭಯ ನಾಯಕರ ವಿರುದ್ಧ ಪ್ರತಿಪಕ್ಷದವರು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅವರ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ. ಸಮುದಾಯದ ನಾಯಕರ ಬೆಳವಣಿಗೆಯನ್ನು ಸಹಿಸಿದ ವ್ಯವಸ್ಥಿತಿ ಪಿತೂರಿ ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಖಂಡಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಕ್ಕಲಿಗ ಸಮುದಾಯದ ಇತರ ನಾಯಕರ‌್ಯಾರೂ ಬೆಳೆಯದಂತೆ ಮಾಡುತ್ತಿದ್ದಾರೆ. ಆ ಮೂಲಕ ಜನಾಂಗವನ್ನು ಇಬ್ಭಾಗ ಮಾಡುತ್ತಿದ್ದಾರೆ. ದಳಪತಿಗಳು ಮಾಡುವ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ತಪ್ಪುಗಳಿಗೆ ಸಾಕ್ಷ್ಯ ತೋರಿಸಲಿ. ಅದು ಬಿಟ್ಟು ವಿನಾಕಾರಣ ಆರೋಪ ಮಾಡುವುದು ಸರಿಯಲ್ಲವೆಂದು ಆಕ್ಷೇಪಿಸಿದರು.

ಒಕ್ಕೂಟದ ಪದಾಧಿಕಾರಿಗಳಾದ ಎನ್.ಕೃಷ್ಣೇಗೌಡ, ಕೋ.ಪು.ಗುಣಶೇಖರ್, ಗೋಪಾಲ್, ನಾಗರಾಜ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net