ಮಹಿಳಾ ಕೌಶಲ ಅಭಿವೃದ್ಧಿ ಕೇಂದ್ರಗಳಿಗೆ ಚಾಲನೆ

IMG_20231015_213427_429.jpg
Published on

ಹುಬ್ಬಳ್ಳಿ: ವಿವಿಧ ಕಂಪನಿಗಳ ಸಿಎಸ್ಆರ್ ಯೋಜನೆಯಡಿ ಮಹಿಳಾ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರಗಳ ಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಭಾನುವಾರ ವಿತರಣೆ ಮಾಡಲಾಯಿತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಹಲವು ಕಂಪನಿಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಈ ಕಾರ್ಯ ಕೈಗೊಂಡಿವೆ.

ಕಲಘಟಗಿ, ನವಲಗುಂದ, ಬು. ಅರಳಿಕಟ್ಟಿ, ಅಳ್ನಾವರ ಹಾಗೂ ಹುಬ್ಬಳ್ಳಿಯಲ್ಲಿ ಗ್ರಾಮವಿಕಾಸ ಸೊಸೈಟಿ ಅನುಷ್ಠನಗೊಳಿಸುತ್ತಿರುವ ಮಹಿಳಾ ಕೌಶಲ ಅಭಿವೃದ್ಧಿ, ನೂತನ ತರಬೇತಿ ಕೇಂದ್ರಗಳಿಗೆ ಭಾನುವಾರ ಚಾಲನೆ ನೀಡಿದ ಸಚಿವ ಪ್ರಲ್ಹಾದ ಜೋಶಿ ಅವರು, ಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಸ್ವಾವಲಂಬಿ ಹಾಗೂ ಸಮರ್ಥರನ್ನಾಗಿಸುವ ಗುರಿ ಹೊಂದಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಆಥಿರ್ಕವಾಗಿ ರ್ದುಬಲವಾಗಿರುವ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ನೀಡುವ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.

ನಾರಿ ಶಕ್ತಿ ವಂದನ್ ಅಧಿನಿಯಮ&2023 ಅನ್ನು ನೂತನ ಸಂಸತ್ ಭವನದಲ್ಲಿ ಸಂವಿಧಾನದ 128ನೇ ತಿದ್ದುಪಡಿಯೊಂದಿಗೆ ಜಾರಿಗೆ ತಂದಿದ್ದು, ಇದರಿಂದ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ. 33ರಷ್ಟು ಮೀಸಲಾತಿ ಸಿಗಲಿದೆ ಎಂದರು.

ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯನ್ನು 2015ರಲ್ಲಿ ಆರಂಭಿಸಲಾಯಿತು. ಇದರಲ್ಲಿ ಯುವ ಜನರಿಗೆ ಕಡಿಮೆ ಸಮಯದಲ್ಲಿ ಕೌಶಲಾಭಿವದ್ಧಿ ತರಬೇತಿ ನೀಡುವ ಉದ್ದೇಶವಿದೆ. ದೇಶದಲ್ಲಿ ಲಿಂಗ ತಾರತಮ್ಯ ನಿವಾರಿಸುವ ಜತೆಗೆ ಮಹಿಳೆಯರ ಸಶಕ್ತೀಕರಣಕ್ಕಾಗಿ ಮಹಿಳಾ ಸ್ವ&ಸಹಾಯ ಗುಂಪುಗಳಿಗೆ ಕೇಂದ್ರ ಸರ್ಕಾರವು ದೀನದಯಾಳ ಉಪಾಧ್ಯಾಯ ಅಂತ್ಯೋದಯ ಯೋಜನೆಯಡಿ ಸಹಾಯ ಒದಗಿಸುತ್ತಿದೆ ಎಂದು ಸಚಿವರು ಹೇಳಿದರು.

ಅತಿಥಿಗಳಾಗಿದ್ದ ಸೆಂಟ್ರಲ್ ೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಉಚಿತ ವೃತ್ತಿಪರ ಟೇಲರಿಂಗ್, ್ಯಾಷನ್ ಡಿಸೈನಿಂಗ್ ತರಬೇತಿ ನೀಡುವುದರೊಂದಿಗೆ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ನೀಡಿ ಸ್ವಾವಲಂಬಿ ಜೀವನ ನಡೆಸಲು ಕೇಂದ್ರ ಸಚಿವರು ಬೆಂಬಲವಾಗಿ ನಿಂತಿದ್ದಾರೆ ಎಂದು ಹೇಳಿದರು.

ಕುಂದಗೋಳ ಶಾಸಕ ಎಂ.ಆರ್. ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಮಾತನಾಡಿದರು.

ಒಟ್ಟು 6960 ಲಾನುಭವಿಗಳ ಪೈಕಿ ಸಾಂಕೇತಿಕವಾಗಿ 5 ಹೊಲಿಗೆ ಯಂತ್ರಗಳನ್ನು ಸಮಾರಂಭದಲ್ಲಿ ವಿತರಿಸಲಾಯಿತು. ಉಳಿದ ಲಾನುಭವಿಗಳಿಗೆ ಅವರ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಗ್ರಾಮ ವಿಕಾಸ ಸೊಸೈಟಿ ಮುಖ್ಯಸ್ಥ ಜಗದೀಶ ನಾಯಕ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net