ಗಾಯಾಳು ಎಎಸ್‌ಐ ಆರೋಗ್ಯ ವಿಚಾರಿಸಿದ ಜೋಶಿ

h12-Kims 2
Published on

ಹುಬ್ಬಳ್ಳಿ: ಪ್ಲೈಓವರ್‌ನ ಕಬ್ಬಿಣದ ರಾಡ್ ತಲೆಗೆ ಬಿದ್ದು ಇಲ್ಲಿಯ ಕೆಎಂಸಿಆರ್‌ಐನಲ್ಲಿ ದಾಖಲಾಗಿರುವ ಉಪನಗರ ಠಾಣೆ ಎಎಸ್‌ಐ ನಾಭಿರಾಜ ದಾಯಣ್ಣವರ ಅವರ ಆರೋಗ್ಯ ಸ್ಥಿತಿಗತಿ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗುರುವಾರ ಮಾಹಿತಿ ಪಡೆದರು. ಅಲ್ಲದೇ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ ಜೋಶಿ, ನಾಭಿರಾಜ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎನ್‌ಎನ್ ಪಿಡಬ್ಲುೃಡಿ ಕಟ್ಟುನಿಟ್ಟಿನ ಸುರಕ್ಷಾ ಕ್ರಮ ಜರುಗಿಸಬೇಕಿತ್ತು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಆಗದಂತೆ ಕ್ರಮ ಜರುಗಿಸಲು ಜಿಲ್ಲಾದಿಕಾರಿ ಸಹಿತಿ ಎಲ್ಲ ಅಧಿಕಾರಿಗಳಿಗೆ ಹೇಳುತ್ತೇನೆ ಎಂದರು.
ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ನಿರ್ದೇಶಕ ಡಾ.ಎಸ್.ಎಫ್. ಕಮ್ಮಾರ, ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ, ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net