ಇನ್ಪೋಸಿಸ್ ಕೊಡುಗೆ ಶ್ಲಾಘಿಸಿ ಜೋಶಿ ಟ್ವಿಟ್

Joshi New
Published on

ಹುಬ್ಬಳ್ಳಿ : ಇನ್ಪೋಸಿಸ್ ತನ್ನ ಹುಬ್ಬಳ್ಳಿ ಶಾಖೆ ಮೂಲಕ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶ್ಲಾಘಿಸಿದ್ದಾರೆ.

ಇನ್ಪೋಸಿಸ್ ಹುಬ್ಬಳ್ಳಿ ಕ್ಯಾಂಪಸ್ ಉತ್ತರ ಕರ್ನಾಟಕ ಭಾಗದ ಉದ್ಯೋಗಿಗಳಿಗೆ ಸದಾ ಉತ್ತೇಜನ, ಪ್ರೋತ್ಸಾಹ ನೀಡುತ್ತಿದೆ ಎಂದು ಪ್ರಲ್ಹಾದ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ ಇನ್ಪೋಸಿಸ್ ಕೇಂದ್ರದಲ್ಲಿ ಹೆಚ್ಚು ಕಾರ್ಯ ಚಟುವಟಿಕೆ ಕೈಗೊಳ್ಳುವಂತೆ ಈ ಹಿಂದೆ ಜನಪ್ರತಿನಿಧಿಗಳಿಂದ ಬೇಡಿಕೆ ಸಲ್ಲಿಸಲಾಗಿತ್ತು. ಇನ್ಪೋಸಿಸ್ ಕ್ರಮದಿಂದ ಎರಡನೇ ಶ್ರೇಣಿಯ ನಗರಗಳ ಪ್ರತಿಭಾವಂತ ಯುವಕರಿಗೆ ಹೆಚ್ಚು ಹೆಚ್ಚು ಉದ್ಯೋಗ ಲಭ್ಯವಾಗಿದ್ದು, ಅಭಿವೃದ್ಧಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿದಂತಾಗಿದೆ ಎಂದು ಜೋಶಿ ಸಂತಸ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net