ಚಿತ್ರರಂಗದ ಚೈತನ್ಯಶಕ್ತಿ ದ್ವಾರಕೀಶ, ಕೇಂದ್ರ ಸಚಿವ ಜೋಶಿ ಸಂತಾಪ

IMG-20240416-WA0031_1.jpg
Published on

ಹುಬ್ಬಳ್ಳಿ: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದ ಚೈತನ್ಯ ಶಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಚಿತ್ರರಂಗ, ಕರುನಾಡಿಗೆ ದೊಡ್ಡ ನಷ್ಟವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ದ್ವಾರಕೀಶ್ ಅವರು ಚಿತ್ರರಂಗಕ್ಕೆ ಹೊಸ ಭಾಷ್ಯ ಬರೆದಿದವರು. ಕಲೆಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಬದುಕಿನಲ್ಲಿ ಏನೇ ಏರಿಳಿತ ಕಂಡರೂ ಒಬ್ಬ ಪ್ರಜ್ಞಾವಂತ ಹಾಸ್ಯ ಕಲಾವಿದರಾಗಿ ಜನರನ್ನು ನಗಿಸುವ, ರಂಜಿಸುವ ಕೆಲಸ ಮಾಡಿದ್ದಾರೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಯಶಸ್ಸು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸಿದ ದ್ವಾರಕೀಶ್ ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ. ಅವರ ಕುಟುಂಬ ಮತ್ತು ಕಲಾ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net