ತಡಸದಲ್ಲಿ ಜೋಶಿ ಪರ ಪತ್ನಿ ಜ್ಯೋತಿ ಮತಯಾಚನೆ

Jytoi Joshi New New
Published on

ಹುಬ್ಬಳ್ಳಿ : ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಅವರ ಧರ್ಮಪತ್ನಿ ಜ್ಯೋತಿ ಜೋಶಿ ಅವರು ಶುಕ್ರವಾರದಂದು ತಡಸದ ಮುತ್ತಳ್ಳಿಯಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜ್ಯೋತಿ ಜೋಶಿ, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಧಾರವಾಡ ಲೋಕಸಭೆ ಕ್ಷೇತ್ರವೂ ಸರ್ವತೋಮುಖ ಬೆಳವಣಿಗೆ ಕಾಣುತ್ತಿದೆ. ಭವಿಷ್ಯದಲ್ಲಿಯೂ ಅಭಿವೃದ್ಧಿ ಮುಂದುವರೆಯಲು ಮತ್ತೆ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಮಹಿಳಾ ಪ್ರಮುಖರು ಮತ್ತು ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net