

ಮಡಿಕೇರಿ: ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕ?ಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು.
ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಆಯೋಜಿತ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಕೊಡಗು ಪತ್ರಕರ್ತರ ಸಂಘದ ಸ್ವಾಸ್ಥ್ಯ ಸುಂದರ, ಸಮಾಜ ಎನ್ನುವ ಘೋ?ವಾಕ್ಯದಂತೆ ಪತ್ರಿಕಾ ಕ್ಷೇತ್ರವು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸದಾ ಶ್ರಮಿಸುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಲ ತುಂಬುವ ಮತ್ತು ಬೆಂಬಲವನ್ನು ನೀಡುವ ಕಾರ್ಯದ ಮೂಲಕ ಸುಂದರ ಸಮಾಜ ನಿರ್ಮಾಣ ಸಾಧ್ಯವೆನ್ನುವ ಅನಿಸಿಕೆ ವ್ಯಕ್ತಪಡಿಸಿದರು.
ಪ್ರಸ್ತುತ ವ್ಯವಸ್ಥೆಯಲ್ಲಿ ಬಂಡವಾಳ ಶಾಹಿಗಳು, ಅಧಿಕಾರಸ್ಥರಿಂದ ನಿರಂತರವಾಗಿ ಅಧಿಕಾರದ ದುರ್ಬಳಕೆ ನಡೆಯುತ್ತಿದೆ. ಸ್ವಾತಂತ್ರ್ಯವನ್ನು ಪಡೆದು ಎಪ್ಪತ್ತೈದು ವ?ಗಳು ಕಳೆದಿರುವ ಈ ದಿನಗಳಲ್ಲಿ ಸಮಬಾಳು, ಸಮಪಾಲು ಎನ್ನುವುದು ಸಮಾಜದಲ್ಲಿ ಇದೆಯೇ ಎನ್ನುವ ಬಗ್ಗೆ ಆತ್ಮಾವಲೋಕನ ಅತ್ಯಗತ್ಯವಾಗಿದೆ. ಪ್ರಸ್ತುತ ಶಿಕ್ಷಣ, ಆರೋಗ್ಯ, ಕೈಗಾರಿಕೆ ಕ್ಷೇತ್ರ ಸೇರಿದಂತೆ ಅಧಿಕಾರ ಸ್ಥಾನಗಳೆಲ್ಲವು ವಂಶಪಾರಂಪರ್ಯದ ಅಧಿಕಾರಕ್ಕೆ ಒಳಪಟ್ಟಿದೆಯೆಂದು ಬೇಸರ ವ್ಯಕ್ತಪಡಿಸಿದರು.
ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾತನಾಡಿ, ಆರೋಗ್ಯಕರ ಸಮಾಜ ನಿಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವ ಪೂರ್ಣವಾದದ್ದು. ಇಂತಹ ಪತ್ರಿಕಾ ಕ್ಷೇತ್ರ ಬದಲಾವಣೆಗಳಿಗೆ ತನ್ನನ್ನು ತೆರೆದುಕೊಳ್ಳುತ್ತಿರುವ ಈ ದಿನಮಾನಗಳಲ್ಲಿ, ಅದನ್ನು ಎಲ್ಲರೂ ಒಗ್ಗೂಡಿ ಎದುರಿಸಿ ಮುನ್ನಡೆಯುವ ಬಗ್ಗೆ ಚಿಂತಿಸುವ ಅಗತ್ಯವಿದೆಯೆಂದು ತಿಳಿಸಿದರು.
ಪತ್ರಿಕಾ ಕ್ಷೇತ್ರದಲ್ಲಿ ದುಡಿಯುತ್ತಿರುವ ಪತ್ರಕರ್ತರಿಗೆ ಮಾಸಾಶನ ಸೌಲಭ್ಯವಿದ್ದು, ಇಲ್ಲಿಯವರೆಗೆ ಇದರ ಸೌಲಭ್ಯವನ್ನು ಆರು ಮಂದಿ ಜಿಲ್ಲೆಯಲ್ಲಿ ಪಡೆದುಕೊಂಡಿದ್ದಾರೆ. ಇದೀಗ ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸುತ್ತಿದ್ದು, ಇಂತಹ ಸೌಲಭ್ಯಗಳನ್ನು ಪತ್ರಕರ್ತರು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಸಮಾರಂಭದ ಅಧ್ಯಕ್ಷತೆ ಮಾತನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್, ಪತ್ರಿಕಾ ಕ್ಷೇತ್ರ, ವಿವಿಧ ಕಾಲ ಘಟ್ಟಗಳಲ್ಲಿ ಹಲವು ಸವಾಲುಗಳನ್ನು ಎದುರಿಸಿಕೊಂಡು ಬರುತ್ತಿದೆ. ಮೊಬೈಲ್, ಇಂಟರ್‌ನೆಟ್ ಮೊದಲಾದ ಆಧುನಿಕ ವ್ಯವಸ್ಥೆಗಳ ನಡುವಿನ ಸವಾಲುಗಳನ್ನು ಪತ್ರಿಕೆ ಸಮರ್ಥವಾಗಿ ಎದುರಿಸಿ ಮುನ್ನಡೆದಿದೆ. ಪ್ರಸ್ತುತ ಕೃತಕ ಬುದ್ಧಿ ಮತ್ತೆಯ ಸವಾಲು ಪತ್ರಿಕಾ ಕ್ಷೇತ್ರದ ಮುಂದಿದೆಯಾದರು ಅದು ಅ?ಗಿ ಪತ್ರಿಕಾ ಕ್ಷೇತ್ರದ ಮೇಲೆ ಪ್ರಭಾವ ಬೀರಿಲ್ಲವೆಂದು ಅಭಿಪ್ರಾಯಿಸಿದರು.
ಹಿರಿಯ ಪತ್ರಕರ್ತರಾದ ಕೆ.ತಿಮ್ಮಪ್ಪ, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವದೃದ್ಧಿ ಸಂಘದ ಅಧ್ಯಕ್ಷ ಜಿ.ವಿ.ರವಿ ಕುಮಾರ್, ಕೊಡಗು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ.ಮುರಳೀಧರ್ ಮಾತನಾಡಿದರು. ವಾರ್ಷಿಕ ಪ್ರಶಸ್ತಿ ಪ್ರದಾನ-ಸಮಾರಂಭದಲ್ಲಿ ಈ ಬಾರಿಯ ವಾರ್ಷಿಕ ಪ್ರಶಸ್ತಿಗಳನ್ನು ೧೦ ಮಂದಿಗೆ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಪತ್ರಕರ್ತರು ಪಾಲ್ಗೊಂಡಿದ್ದರು.