ಕಾಲು ಜಾರಿ ಬಾವಿಗೆ ಬಿದ್ದು ಪತ್ರಕರ್ತ ಸಾವು: ರಜೆ ಕಳೆಯಲು ಊರಿಗೆ ಬಂದಿದ್ದಾಗ ಘಟನೆ

Jounalist
Published on

ತುಮಕೂರು: ರಜೆ ಕಳೆಯಲು ಊರಿಗೆ ಬಂದಿದ್ದ ಪತ್ರಕರ್ತ ರೋಹಿತ್(36) ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಇಲ್ಲಿನ ಕ್ಯಾತ್ಸಂದ್ರ ಸಮೀಪದ ಸದರನಹಳ್ಳಿಯಲ್ಲಿ ತೋಟವೊಂದರ ಬಾವಿಯಲ್ಲಿ ಈಜಲು ತೆರಳಿದ್ದಾಗ ಘಟನೆ ಸಂಭವಿಸಿದೆ.

ರೋಹಿತ್ ಅವರು ಇಂಗ್ಲಿಷ್​ ಪತ್ರಿಕೆಯೊಂದರ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ‌ ಊರಾದ ಸದರನಹಳ್ಳಿಗೆ ಬಂದಿದ್ದರು. ಸ್ನೇಹಿತರೊಂದಿಗೆ ತಮ್ಮ ತೋಟದ ಬಾವಿಯಲ್ಲಿ ಈಜಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಈ ವೇಳೆ ಬಾವಿಯ ಕಲ್ಲು ತಲೆಗೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net