ಪತ್ರಕರ್ತ ಹಳೇಬೀಡು ಕೃಷ್ಣಮೂರ್ತಿ ಅವರಿಗೆ ಪತ್ನಿ ವಿಯೋಗ

Journalist Halebidu Krishnamurthy lost his wife
Published on

ಮೃತಪಟ್ಟಿದ್ದಾರೆ.

ಬೆಂಗಳೂರು: ಹಿರಿಯ ಪತ್ರಕರ್ತ ಹಳೇಬೀಡು ಕೃಷ್ಣಮೂರ್ತಿ ಅವರ ಪತ್ನಿ ಜಯಲಕ್ಷ್ಮಿ (84) ವಯೋಸಹಜ ಕಾಯಿಲೆಯಿಂದ ಬೆಂಗಳೂರಿನಲ್ಲಿ

ಪತಿ ಕೃಷ್ಣಮೂರ್ತಿ, ಐವರು ಪುತ್ರಿಯರು, ಇಬ್ಬರು ಪುತ್ರರು, ಮೊಮ್ಮಕ್ಕಳು ಮತ್ತು ಮರಿಮಕ್ಕಳನ್ನು ಅಗಲಿದ್ದಾರೆ. ಕೃಷ್ಣಮೂರ್ತಿ ಅವರು ದಾವಣಗೆರೆಯಲ್ಲಿ ನಗರವಾಣಿ ಪತ್ರಿಕೆ, ಹಾಸನದಲ್ಲಿ ಜನಮಿತ್ರ, ಇಂಡಿಯನ್ ಎಕ್ಸಪ್ರೆಸ್, ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರರಾಗಿ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಶ್ರೀಮತಿ ಜಯಲಕ್ಷ್ಮಿ ಅವರು ಸಾಥ್ ನೀಡಿದ್ದರು. ಶ್ರೀಮತಿ ಜಯಲಕ್ಷ್ಮಿ ಮತ್ತು ಕೃಷ್ಣಮೂರ್ತಿ ಅವರು ಇತ್ತೀಚೆಗಷ್ಟೇ 64ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ ಅವರ ಅಂತ್ಯಸಂಸ್ಕಾರ ಯುಗಾದಿ ದಿನವೇ ಚಾಮರಾಜನಗರಪೇಟೆ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಜಯಲಕ್ಷ್ಮಿ ಕೃಷ್ಣಮೂರ್ತಿ ಅವರ ನಿಧನಕ್ಕೆ ದಾವಣಗೆರೆ ಮತ್ತು ಹಾಸನ ಮಾಧ್ಯಮ ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ.

ಜಯಲಕ್ಷ್ಮಿ ಅವರ‌ ನಿಧನಕ್ಕೆ ಸಂತಾಪ ಸೂಚಿಸಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಮೃತರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net