ಪ್ರೆಸ್ ಕ್ಲಬ್ ಗೌರವ ಸನ್ಮಾನ
ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾದ ಬಾಲಸುಬ್ರಹ್ಮಣ್ಯ ಕಂಜಾರ್ರು, ರಾಮಣ್ಣ ವೈ., ಹರ್ಷ, ರೇಮಂಡ್ ಡಿ'ಕುನ್ಹಾ ಮತ್ತು ಆರ್.ಎಮ್. ರಾಜೇಂದ್ರನ್ ಅವರುಗಳನ್ನು ಗೌರವಿಸಲಾಯಿತು. ಮಾಧ್ಯಮ ಅಕಾಡೆಮಿ ವಿಶೇಷ ಪ್ರಶಸ್ತಿ ಪುರಸ್ಕೃತ ಆನಂದ್ ಶೆಟ್ಟಿ, ಕೆಡಬ್ಲ್ಯುಜೆಎ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಆರ್., ರಾಜೇಶ್ ಶೆಟ್ಟಿ ದೂತ, ಅಬ್ದುಲ್ ರಹೀಮಾನ್ ಟಿ., ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ್ ಇರಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಎ.ಕೆ. ಕುಕ್ಕಿಲ, ಸುಳ್ಯ ತಾಲೂಕು ಕಸಾಪ ಪ್ರಶಸ್ತಿ ಪುರಸ್ಕೃತ ಹರೀಶ್ ಮೋಟುಕಾನ ಅವರುಗಳನ್ನು ಸನ್ಮಾನಿಸಲಾಯಿತು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.