

ಉಡುಪಿ: ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಂಘಟಕ, ಕುರ್ಪಾಡಿ ಆದಿಗ್ರಾಮೋತ್ಸವದ ರೂವಾರಿ ಶೇಖರ್ ಅಜೆಕಾರು (54) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶೇಖರ್ ಅಜೆಕಾರ್ ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಸಾವಿರಾರು ಹೊಸಮುಖ ಪ್ರತಿಭೆಗಳನ್ನು ನಾಡಿಗೆ ಪರಿಚಯಿಸಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಗ್ನಿಶಿಖಾ ಮಂಚ್ ಪ್ರಶಸ್ತಿ, ಮಾಧ್ಯಮ ರತ್ನ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ ಗೌರವವನ್ನು ಪಡೆದಿದ್ದಾರೆ. ಅವರು ಪತ್ನಿ, ಮಗ, ಮಗಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.