

ಸುಳ್ಯ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಉತ್ಸವ, ಗೌರವ ಸನ್ಮಾನ ಹಾಗೂ ಆಟಿ ಭೋಜನಕೂಟವು ಸುಳ್ಯದಲ್ಲಿ ಬುಧವಾರ ನಡೆಯಿತು.
ಕೆ.ಜೆ.ಯು ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಶಿ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಹಾಗೂ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ತೆಂಗಿನ ಹಿಂಗಾರ ಅರಳಿಸಿ, ಶುಭಹಾರೈಸಿದರು.
ಸುಳ್ಯದ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹಿರಿಯ ನಾಟಿ ವೈದ್ಯ ರಾಮಣ್ಣ ನಾಯ್ಕ ನೀರಬಿದಿರೆ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಅರೆಭಾಷೆ ಅಕಾಡೆಮಿ ನೂತನ ಅಧ್ಯಕ್ಷ ಸದಾನಂದ ಮಾವಜಿ, ಸದಸ್ಯರಾದ ಲೋಕೇಶ್ ಊರುಬೈಲು, ಚಂದ್ರಾವತಿ ಬಡ್ಡಡ್ಕ ಅವರನ್ನು ಗೌರವಿಸಲಾಯಿತು. ವಯನಾಡು ಭೂಕುಸಿತದಿಂದ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಧ್ಯಾಹ್ನ ಆಟಿಯ ತಿಂಡಿ-ತಿನಿಸುಗಳ ಸಹಭೋಜನ ನಡೆಯಿತು. ವಿವಿಧ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.
ಕೆ.ಜೆ.ಯು ದ.ಕ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಜಿಲ್ಲಾ ಘಟಕದ ಕೋಶಾಧಿಕಾರಿ ಗಿರಿಧರ ಶೆಟ್ಟಿ, ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ, ಕೋಶಾಧಿಕಾರಿ ವಿನಯ್ ಜಾಲ್ಸೂರು ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಘಟಕದ ನಿರ್ದೇಶಕ ಶಿವರಾಮ ಕಜೆಮೂಲೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.