ಪತ್ರಕರ್ತರ ಎಲ್ಲ ಬೇಡಿಕೆ ಈಡೇರಿಕೆಗೆ ಪ್ರಯತ್ನ: ಸಚಿವ ಸತೀಶ ಜಾರಕಿಹೊಳಿ

06 Jaggu 7
ಬೆಳಗಾವಿ ಎಸ್​ಜಿಬಿಐಟಿ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಸಚಿವ ಸತೀಶ್​ ಜಾರಕಿಹೊಳಿ ಹಾಗೂ ಸಂಸದ ಜಗದೀಶ ಶೆಟ್ಟರ್​ ಬೆಳಗಾವಿ ಜಿಲ್ಲಾ ಇಲೆಕ್ಟ್ರಾನಿಕ್​ ಮೀಡಿಯಾ ರ್ಜನಲಿಸ್ಟ್​ ಅಸೋಸಿಯೇಷನ್​ ಉದ್ಘಾಟಿಸಿದರು. ಶಾಸಕರಾದ ಅಸೀಫ್​ ಸೇಠ್​, ಬಾಬಾಸಾಹೇಬ ಪಾಟೀಲ, ಮಹಾಂತೇಶ ಕೌಜಲಗಿ, ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಇತರರಿದ್ದರು.
Published on

ಬೆಳಗಾವಿ: ಪತ್ರಕರ್ತರಿಗೆ ನಿವೇಶನ ಹಾಗೂ ಆರೋಗ್ಯ ವಿಮೆ ಸೇರಿ ಪತ್ರಕರ್ತರ ಎಲ್ಲ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಜಾರಕಿಹೊಳಿ ಭರವಸೆ ನೀಡಿದರು. ನಗರದ ಎಸ್​ಜಿಬಿಐಟಿ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಬೆಳಗಾವಿ ಇಲೆಕ್ಟ್ರಾನಿಕ್​ ಮೀಡಿಯಾ ಅಸೋಸಿಯೇಶನ್​ ಉದ್ಘಾಟಿಸಿ ಮಾತನಾಡಿದ ಅವರು, ನಿವೇಶನ ಮಂಜೂರಾತಿಗೆ ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲ್ಪಡುವ ಮಾಧ್ಯಮರಂಗವು ಆಡಳಿತ ವ್ಯವಸ್ಥೆ ಸುಧಾರಣೆಗೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು. ಭಾಷಾ ಸೂಕ್ಷ$್ಮತೆ ವಿಷಯವಾಗಿ ಜಿಲ್ಲೆಯಲ್ಲಿ ನಡೆಯುವ ವರದಿಗಳು ದೆಹಲಿಯಲ್ಲಿ ಕೂಡ ಸದ್ದು ಮಾಡುತ್ತವೆ. ಆದ್ದರಿಂದ ಕೆಲವೊಮ್ಮೆ ವೈಯಕ್ತಿಕ ರ್ಷಣೆಗಳು ಕೂಡ ಜಾತಿ&ಧರ್ಮ, ಭಾಷಾ ವೈಷಮ್ಯದ ಸ್ವರೂಪ ಪಡೆದುಕೊಂಡು ಜಿಲ್ಲೆಗೆ ಕೆಟ್ಟ ಹೆಸರು ತರುತ್ತವೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಆದ್ದರಿಂದ ಸೂಕ್ಷ$್ಮವಿಚಾರಗಳನ್ನು ಮಾಧ್ಯಮ ಪ್ರತಿನಿಧಿಗಳು ಸಮಗ್ರ ಪರಾಮರ್ಶೆ ಮಾಡಿ ನೈಜ ಸಂಗತಿ ವರದಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಂಸದ ಜಗದೀಶ ಶೆಟ್ಟರ್​ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯು ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ, ಮಾಧ್ಯಮದ ಮೂಲಕ ಯಶಸ್ವಿಯಾಗಿ ನಡೆಯುತ್ತದೆ. ಸಾಮಾಜಿಕ ಜಾಗೃತಿ, ಜನರಲ್ಲಿ ತಿಳಿವಳಿಕೆ ಮೂಡಿಸುವ ಕಾರ್ಯವನ್ನು ಇಲೆಕ್ಟ್ರಾನಿಕ್​ ಮತ್ತು ಮುದ್ರಣ ಮಾಧ್ಯಮ ಮಾಡುತ್ತಿದ್ದು, ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತಿವೆ. ಪತ್ರಕರ್ತರಿಗೆ ನಿವೇಶನ ಮಂಜೂರಾತಿ ಸೇರಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕರಾದ ಆಸೀಫ್​ ಸೇಠ್​, ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ನಗರ ಪೊಲೀಸ್​ ಆಯುಕ್ತ ಇಡಾ ಮಾರ್ಟಿನ್​ ಮಾರ್ಬನ್ಯಾಂಗ್​, ಪಾಲಿಕೆ ಆಯುಕ್ತೆ ಶುಭ.ಬಿ., ಗುರುನಾಥ ಕಡಬೂರ ಹಾಗೂ ಅಸೋಸಿಯೇಷನ್​ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net