ಗ್ರಾಮೀಣ ಪತ್ರಕರ್ತರಿಗೂ ಸೌಲಭ್ಯ ಒದಗಿಸಿ

BBGD 14-1
Published on

ಬಸವನಬಾಗೇವಾಡಿ: ರಾಜ್ಯ ಸರ್ಕಾರ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ನೀಡಿರುವ ಸೌಲಭ್ಯವನ್ನು ತಾಲೂಕು ಹಾಗೂ ಗ್ರಾಮೀಣ ಮಟ್ಟದ ಪತ್ರಕರ್ತರಿಗೂ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಎಂ.ಎನ್. ಬಳಿಗಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸರ್ಕಾರ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಉಚಿತ ನಿವೇಶನ ಸೇರಿ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ, ತಾಲೂಕು ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಾವುದೇ ಸೌಲಭ್ಯಗಳನ್ನು ನೀಡದೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ರಾಜು ಗಣಾಚಾರಿ, ಮಲ್ಲಿಕಾರ್ಜುನ ದೇವರಮನಿ, ಬಸವರಾಜ ನಂದಿಹಾಳ, ಮಹಾಂತೇಶ ಸಂಗಮ, ಪ್ರಕಾಶ ಬೆಣ್ಣೂರ, ವಾಸುದೇವ ಮ್ಯಾಗೇರಿ, ನಾಗೇಶ ನಾಗೂರ, ಮಂಜು ಕಲಾಲ, ಅಜೀಜ ಬಳಬಟ್ಟಿ, ಗುರುರಾಜ ಕನ್ನೂರ, ದಯಾನಂದ ಬಾಗೇವಾಡಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net