ವಿಟ್ಲದ ಗದ್ದೆಯಲ್ಲಿ ಪತ್ರಕರ್ತರಿಂದ ಕೃಷಿ ಜಾಗೃತಿ

WhatsApp Image 2021-07-29 at 10.45.56 AM
Published on

ಮಂಗಳೂರು: ಸದಾ ತಮ್ಮ ಒಡನಾಡಿಯಾಗಿರುವ ಪೆನ್ನು, ಪೇಪರ್‌, ಮೈಕ್‌, ಕ್ಯಾಮರವನ್ನು ಬದಿಗಿಟ್ಟು ಗದ್ದೆಯ ಕೆಸರಿನಲ್ಲಿ ಮುಳುಗೇಳುವ ಮೂಲಕ ತಾವು ಕೃಷಿ ಬದುಕಿಗೂ ಸೈ ಎಂದು ದ.ಕ ಜಿಲ್ಲೆಯ ಪತ್ರಕರ್ತರು ತೋರಿಸಿಕೊಟ್ಟಿದ್ದಾರೆ. ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ವಿಟ್ಲ ತಾಲೂಕಿನ ಅಳಿಕೆ ಗ್ರಾಮದ ಮಿತ್ತಳಿಕೆಯ (ಚೆಂಡುಕಳ) ಗದ್ದೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದ ಈ ಚಟುವಟಿಕೆಯಲ್ಲಿ ಪತ್ರಕರ್ತರು ಸ್ಥಳೀಯರೊಂದಿಗೆ ಸೇರಿ ನೇಜಿ ನಾಟಿ ಮಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರವಿರಾಜ್‌, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್‌ ಮಾಂಬಾಡಿ ಮೊದಲಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net