ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಸಮಾಲೋಚನಾ ಸಭೆ

c
Published on

ಮಂಗಳೂರು,ಆ.2;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನವಂಬರ್‌ನಲ್ಲಿ ಅಡ್ಯಾರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಪಂದ್ಯಾಟದ ಸಿದ್ಧತೆಗಾಗಿ ಸಮಾಲೋಚನಾ ಸಭೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಉಪಸ್ಥಿತಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆಯಿತು. ವಿವಿಧ ಜಿಲ್ಲೆಗಳಿಂದ 20ಕ್ಕೂ ಅಧಿಕ ತಂಡಗಳು ಭಾಗವಹಿಸಲಿದ್ದು ಆಟಗಾರರು, ತೀರ್ಪುಗಾರರು ಸೇರಿ ಸುಮಾರು 400 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದರು.
ಪಂದ್ಯಾಟಕ್ಕೆ ತಗಲುವ ವೆಚ್ಚ ಸಂಗ್ರಹ, ವಸತಿ ಹಾಗೂ ಊಟೋಪಚಾರ ವ್ಯವಸ್ಥೆ ಬಗ್ಗೆ ಪ್ರತ್ಯೇಕ ಸಮಿತಿ ರಚಿಸಿ ಕಾರ್ಯೋ ನ್ಮುಖರಾಗುವಂತೆ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪಂದ್ಯಾಟದ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪದಾಧಿಕಾರಿಗಳಾದ ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್, ಮುಹಮ್ಮದ್ ಆರಿಫ್, ವೇಣು ವಿನೋದ್, ವಿಜಯ ಕೋಟ್ಯಾನ್, ಸುರೇಶ್ ಪಳ್ಳಿ, ಸತೀಶ್ ಇರಾ, ಅಶೋಕ್ ಶೆಟ್ಟಿ ಬಿ.ಎನ್ , ಜೀವನ್ , ಸಂದೇಶ್ ಜಾರ, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಕೇಶವ ಕುಂದರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net