ದ.ಕ.ಜಿಲ್ಲಾ ಮಟ್ಟದ ಜೂನಿಯರ್ ರೆಡ್‌ಕ್ರಾಸ್ ಸಮ್ಮೇಳನ

mng-9dec-exellent
Published on



ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವತಿಯಿಂದ ದ.ಕ.ಜಿಲ್ಲಾ ಮಟ್ಟದ ಜೂನಿಯರ್ ರೆಡ್‌ಕ್ರಾಸ್ ಸಮ್ಮೇಳನ ಎಕ್ಸಲೆಂಟ್ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಸಮ್ಮೇಳನ ಉದ್ಘಾಟಿಸಿದರು. ಶಾಲಾ ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ರೆಡ್‌ಕ್ರಾಸ್, ಎನ್‌ಎಸ್‌ಎಸ್, ಎನ್‌ಸಿಸಿಯಲ್ಲಿ ಭಾಗವಹಿಸುವ ಮೂಲಕ ಸೇವಾ
ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ದ.ಕ.ಜಿಲ್ಲಾ ರೆಡ್‌ಕ್ರಾಸ್ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಖಜಾಂಜಿ ಪದ್ಮರಾಜ್ ಆರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ
ಭಾಗವಹಿಸಿದ್ದರು. ಯೂತ್ ರೆಡ್‌ಕ್ರಾಸ್‌ನ ನಿರ್ದೇಶಕ ಸಚೇತ್ ಸುವರ್ಣ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಯ ನಿರ್ದೇಶಕಿ ರಶ್ಮಿತಾ ಜೈನ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪ ನಿರ್ದೇಶಕ
ಸಿ.ಡಿ.ಜಯಣ್ಣ , ದ.ಕ. ಜಿಲ್ಲಾ ಪ. ಪೂ.ಕಾಲೇಜುಗಳ ಪ್ರಾಚಾರ್ಯರ ಸಂಘ ಅಧ್ಯಕ್ಷ ಜಯಾನಂದ ಸುವರ್ಣ,ಎಕ್ಸಲೆಂಟ್
ಪ.ಪೂ.ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ರೆಡ್‌ಕ್ರಾಸ್ ಕಾರ್ಯದರ್ಶಿ ಸಂಜಯ ಶೆಟ್ಟಿ, ಸಮ್ಮೇಳನದ ಸಂಯೋಜಕ ಡಾ.ಪ್ರಶಾಂತ್ ಕುಮಾರ್ ಉಪಸ್ಥಿತರಿದ್ದರು. ಜೂನಿಯರ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕ ವಿಠಲ.ಎ. ಸ್ವಾಗತಿಸಿದರು.
ಪ್ರಶಸ್ತಿ ವಿಜೇತರ ವಿವರ
*ಉತ್ತಮ ಜೂನಿಯರ್ ರೆಡ್‌ಕ್ರಾಸ್ ಘಟಕ : ಪ್ರಥಮ - ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ,
ಬೆಳ್ತಂಗಡಿ,
ದ್ವಿತೀಯ-ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ , ತೃತೀಯ -ಶ್ರೀ ರಾಮಕೃಷ್ಣ ಪ್ರೌಢಶಾಲೆ, ಹರೇಕಳ
*ಉತ್ತಮ ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್ : ಪ್ರಥಮ -ಪ್ರಮೀಳಾ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ, ದ್ವಿತೀಯ - ಜ್ಯೋತಿಲಲಕ್ಷ್ಮಿ, ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ,
ತೃತೀಯ- ತ್ಯಾಗಂ ಹರೇಕಳ, ಶ್ರೀ ರಾಮಕೃಷ್ಣ ಪ್ರೌಢಶಾಲೆ, ಹರೇಕಳ
* ಸಾಂಸ್ಕೃತಿಕ ಸ್ಪರ್ಧೆ : ಪ್ರಥಮ -ಬಂಟ್ವಾಳ ತಾಲೂಕು ವಲಯ, ದ್ವಿತೀಯ -ಮೂಡುಬಿದಿರೆ ತಾಲೂಕು ವಲಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net