ಸಾಧಕ ಮಹಿಳೆಯರಿಗೆ ಸನ್ಮಾನ

jss womens day
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಉಣಕಲ್​ನಲ್ಲಿರುವ ಜೆಎಸ್​ಎಸ್ ಶ್ರೀ ಮಂಜುನಾಥೇಶ್ವರ ಕೇಂದ್ರೀಯ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಿಕ್ಷಣ, ಸಮಾಜ ಸೇವೆ, ವ್ಯಾಪಾರ, ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನಂದಿನಿ ಮಜೇಥಿಯಾ, ರೂಪಾಲಿ ಜಾಧವ, ರೂಪಾ ಬಿಲೆಹಾಳ, ಸವಿತಾ ದೀಕ್ಷಿತ ಹಾಗೂ ಮೆಹರ್ ಖಾಜಿ ಇವರನ್ನು ಸನ್ಮಾನಿಸಲಾಯಿತು. ಶಾಲೆಯ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.

ಮುಖ್ಯೋಧ್ಯಾಪಕಿ ರಜನಿ ಪಾಟೀಲ ಮಾತನಾಡಿ, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅಮ್ಮನವರು ಮಹಿಳಾ ಸಬಲೀಕರಣಕ್ಕೆ ಸಲ್ಲಿಸುತ್ತಿರುವ ಸೇವೆ, ಸಮಾಜ ಸೇವೆ ಮತ್ತು ಸಾಮಾಜಿಕ ಕಳಕಳಿ ಅನುಕರಣೀಯ. ಜೆಎಸ್​ಎಸ್ ಕಾರ್ಯದರ್ಶಿ ಅಜಿತ ಪ್ರಸಾದರವರ ಪ್ರೇರಣೆ ಮತ್ತು ಮಾರ್ಗದರ್ಶನದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ. ಶಿಕ್ಷಣ, ಸಮಾಜ ಸೇವೆ, ವ್ಯವಹಾರ, ಮಾಧ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net