

ಧಾರವಾಡ: ಫಲಿತಾಂಶ ಪಡೆಯುವ ಸಾಮರ್ಥ್ಯ ಎಲ್ಲ ವಿದ್ಯಾರ್ಥಿಗಳಲ್ಲೂ ಇರುತ್ತದೆ. ಅದಕ್ಕೆ ತಕ್ಕ ಪೂರ್ವತಯಾರಿಯ ಅವಶ್ಯಕತೆ ಇದೆ. ದೃಢವಿಶ್ವಾಸ ಮತ್ತು ಇಚ್ಛಾಶಕ್ತಿಯೊಂದಿಗೆ ನಿರಂತರ ಅಧ್ಯಯನ ಮಾಡಿದರೆ ಯಶಸ್ಸು ಖಚಿತ ಎಂದು ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಹೇಳಿದರು.
ಇಲ್ಲಿನ ಮೃತ್ಯುಂಜಯನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಜರುಗಿದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ಡಾ. ಬಿ.ಎನ್. ಭಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ವಮಂಗಳಾ ಡಿ.ಕೆ ವಾರ್ಷಿಕ ವರದಿ ಮಂಡಿಸಿದರು.
ಡಾ. ಸೂರಜ್ ಜೈನ್, ಜಿನ್ನಪ್ಪ ಕುಂದಗೋಳ, ತ್ರಿವೇಣಿ ಆರ್. ಹಾಗೂ ಕ್ರೀಡಾ ನಿರ್ದೇಶಕ ನಾಗರಾಜ ತೋಟಗೇರ ವೇದಿಕೆಯಲ್ಲಿದ್ದರು.
ಕೆಳದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮತ್ತು ರಾಜ್ಯ ಮಟ್ಟದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.
ಲತಾ ಹಿರೇಮಠ ಪರಿಚಯಿಸಿದರು. ಪ್ರಗತಿ ಕುಲಕರ್ಣಿ ನಿರೂಪಿಸಿದರು. ಲತ್ತಫಾ ಹುಡೇದಮನಿ ವಂದಿಸಿದರು.
ವಿದ್ಯಾರ್ಥಿಗಳಿAದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.