

ಧಾರವಾಡ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ಜೆ.ಎಸ್.ಎಸ್ ಆರ್.ಎಸ್ ಹುಕ್ಕೇರಿಕರ ಕಾಲೇಜಿನ ಕ್ರೀಡಾಪಟುಗಳು 13 ಚಿನ್ನ 13 ಬೆಳ್ಳಿ ಹಾಗೂ ಕಂಚಿನ ಪದಕ ಸೇರಿ 27 ಪದಕ ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕ್ರೀಡಾ ಸಾಧಕರನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಪ್ರಾಚಾರ್ಯೆ ಭಾರತಿ ಶಾನಭಾಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಿದ್ದರು.