

ಧಾರವಾಡ: ಹುಬ್ಬಳ್ಳಿಯ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿಗಳು ಪಾಂಡಿಚೇರಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 28ನೇ ರಾಷ್ಟ್ರಮಟ್ಟದ ಕಿರಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಸನ್ಮಾನಿಸಿದರು. ಪ್ರಾಚಾರ್ಯು ರಜನಿ ಪಾಟೀಲ, ಮಹಾವೀರ ಉಪಾಧ್ಯೆ, ಇತರರಿದ್ದರು.