ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡು ಸಾಧಿಸಿ: ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಕಿವಿಮಾತು

JSS Public School Anniversary Mandya
Published on

ಮಂಡ್ಯ: ವಿದ್ಯಾರ್ಥಿಗಳು ಸಮಯ ಪಾಲನೆ ಜತೆಗೆ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

ನಗರದ ಕೆರೆಯಂಗಳದ ಕೆಎಚ್‌ಪಿ ಕಾಲನಿಯಲ್ಲಿರುವ ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾಧನೆ ಮಾಡಬೇಕೆಂದುಕೊಳ್ಳುವ ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿ.ವಿ ವೀಕ್ಷಣೆಯಿಂದ ದೂರವಿರಬೇಕು. ಹೆಚ್ಚು ಪಠ್ಯಪುಸ್ತಕ ಓದು ಮತ್ತು ಬರಹದಿಂದ ಗುರಿ ಸಾಧಿಸಬಹುದು ಎಂದರು.

ರಾಷ್ಟ್ರೀಯ ಕ್ರೀಡಾಪಟು ಎಚ್.ವಿ.ಪುನೀತ್, ಜೆಎಸ್‌ಎಸ್ ಮಹಾವಿದ್ಯಾಪೀಠ ಉಪನಿರ್ದೇಶಕ ಅಶೋಕ್‌ಪಾಳ್ಯ, ಪ್ರಾಂಶುಪಾಲೆ ನಿಶಾಮಣಿ ಇತರರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net