ಡಾ.ಶ್ರೀ ರಾಜೇಂದ್ರ ಸ್ವಾಮೀಜಿ ಸ್ಮರಣಾರ್ಥ ಕ್ರೀಡಾಕೂಟ

jss sports
Published on

ಮೈಸೂರು: ಸುತ್ತೂರು ಮಠದ ಡಾ. ಶ್ರೀ ರಾಜೇಂದ್ರ ಸ್ವಾಮೀಜಿ ಸ್ಮರಣಾರ್ಥ ನಗರದ ಎಸ್‌ಜೆಸಿಇ ಕಾಲೇಜಿನಲ್ಲಿ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವ ವಿದ್ಯಾಲಯ ವತಿಯಿಂದ ಶುಕ್ರವಾರ ಯುವಕ, ಯುವತಿಯರಿಗೆ ಹಮ್ಮಿಕೊಂಡಿದ್ದ ಬಾಸ್ಕೆಟ್ ಬಾಲ್ ಹಾಗೂ ಥ್ರೋಬಾಲ್ ಪಂದ್ಯಾವಳಿ ಏರ್ಪಡಿಸಲಾಗಿತ್ತು.

ಏಷ್ಯಾನ್ ಥ್ರೋಬಾಲ್ ಫೆಡರೇಷನ್‌ನ ತಾಂತ್ರಿಕ ಸಮಿತಿ ಸದಸ್ಯ ಎನ್.ಎಸ್. ಸುಬ್ರಮಣ್ಯ ಪಂದ್ಯಾವಳಿಗೆ ಚಾಲನೆ ನೀಡ ಮಾತನಾಡಿ,ದೇಹದ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯ ಅವಶ್ಯಕತೆ ಇದೆ. ಎಲ್ಲರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಎಸ್‌ಜೆಸಿಇ ಕಾಲೇಜಿನಲ್ಲಿ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವ ವಿದ್ಯಾಲಯ ಕುಲಪತಿ ಡಾ.ಎ.ಎನ್. ಸಂತೋಷ್ ಕುಮಾರ್, ಎಸ್‌ಜೆಸಿಇ ಕಾಲೇಜು ಪ್ರಾಂಶುಪಾಲ ಡಾ.ಸಿ. ನಟರಾಜು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net