ಮೇ 04ಕ್ಕೆ ಜೆಎಸ್‌ಎಸ್ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸಿಬಿಷನ್

New Project
Published on

ಬೆಂಗಳೂರು: ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯು ಉತ್ತರಹಳ್ಳಿಯಲ್ಲಿರುವ ಕಾಲೇಜು ಆವರಣದಲ್ಲಿ ಶನಿವಾರ ‘ಓಪನ್ ಡೇ ಪ್ರಾಜೆಕ್ಟ್-2024’ ಎಂಬ ಹೆಸರಿನಲ್ಲಿ ಪ್ರಾಜೆಕ್ಟ್ ಎಕ್ಸಿಬಿಷನ್ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಸಂಸ್ಥೆಯ ತಾಂತ್ರಿಕ ಜ್ಞಾನ ಮತ್ತು ಶ್ರೇಷ್ಠತೆಯನ್ನು ಅನಾವರಣಗೊಳಿಸಲಾಗುವುದು. ವಿದ್ಯಾರ್ಥಿಗಳ ಕೌಶಲ್ಯ, ಸೃಜನಶೀಲತೆ, ಉತ್ಸಾಹ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ವೇದಿಕೆ ನಿರ್ಮಿಸಿಕೊಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಪ್ರಾಜೆಕ್ಟ್‌ಗಳ ಪ್ರದರ್ಶನವನ್ನು ಶಿಕ್ಷಣತಜ್ಞರಾದ ಪಿ.ಬಿ.ಕೋಟೂರು ಅವರು ಉದ್ಘಾಟಿಸಲಿದ್ದು, ಉದ್ಯಮದ ತಜ್ಞರು ಪ್ರದರ್ಶನಗೊಳ್ಳಲಿರುವ ಪ್ರಾಜೆಕ್ಟ್‌ಗಳನ್ನು ಮೌಲ್ಯಮಾಪನ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net