ಜುಬೇದ ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ

26 nrp 2
Published on

ಎನ್.ಆರ್.ಪುರ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪಪಂ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ಜುಬೇದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಪಂ ಅಧ್ಯಕ್ಷೆ ಸುರೈಯಾಭಾನು ತಮ್ಮ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪಪಂ ಸದಸ್ಯೆ ಜುಬೇದ ಮಾತ್ರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ತನುಜ.ಟಿ.ಸವದತ್ತಿ ಅವರು ಜುಬೇದ ಅವರ ಅವಿರೋಧ ಆಯ್ಕೆ ಘೋಷಿಸಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಚುನಾವಣಾಧಿಕಾರಿ ಶಿರಸ್ತೆದಾರ್ ವೇಣುಗೋಪಾಲ್ ಇದ್ದರು.

ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್.ಎಲ್.ಶೆಟ್ಟಿ ಮಾತನಾಡಿ, ಜುಬೇದ ಅವರು ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಪಂ ಇತಿಹಾಸದಲ್ಲೇ ಕಾಂಗ್ರೆಸ್‌ನ ಒಂಭತ್ತು ಸದಸ್ಯರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಮುಂದಿನ ಏಳು ತಿಂಗಳ ಅವಧಿಯಲ್ಲಿ ಎಲ್ಲ ಸದಸ್ಯರ ಸಹಕಾರ ಪಡೆದು ಉತ್ತಮ ಆಡಳಿತ ನಡೆಸಲಿ. ಮೊದಲ ಒಂದೂವರೆ ವರ್ಷದ ಅವಧಿಯಲ್ಲಿ ಕರೊನಾ ಬಂದಿದ್ದರಿಂದ ಅಭಿವೃದ್ಧಿಗೆ ಹಿನ್ನೆಡೆಯಾಯಿತು. ಪ್ರಸ್ತುತ ಶವ ಸಂಸ್ಕಾರಕ್ಕೆ ನೀಡುತ್ತಿದ್ದ ಎರಡು ಸಾವಿರ ರೂಗಳನ್ನು ಮೂರು ಸಾವಿರಕ್ಕೆ ಹೆಚ್ಚಿಸಲಾಗಿದೆ. ಸಣ್ಣ,ಪುಟ್ಟ ಕಾಮಗಾರಿಗಳನ್ನು ಪಪಂ ಸಂಪನ್ಮೂಲದಲ್ಲೇ ಖರ್ಚು ಮಾಡಬೇಕಾಗಿದೆ. ಕಳೆದ 20ವರ್ಷದಿಂದಲೂ ನಿವೇಶನ ನೀಡಲು ಸಾಧ್ಯವಾಗಿರಲಿಲ್ಲ. ಈಗ 158 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪಿ.ಆರ್.ಸದಾಶಿವ, ಸಾಜು, ಇ.ಸಿ.ಜೋಯಿ, ಎಂ.ಆರ್.ರವಿಶಂಕರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಉಮಾ ಕೇಶವ್, ಸದಸ್ಯರಾದ ಸುರೈಯಾಭಾನು, ಸೋಜ, ಮುನಾವರ್ ಪಾಷಾ, ಆರ್.ಕುಮಾರಸ್ವಾಮಿ, ಕಾಂಗ್ರೆಸ್ ನಗರ ಅಧ್ಯಕ್ಷ ಬಿಳಾಲುಮನೆ ಉಪೇಂದ್ರ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಮುಖಂಡ ಎಸ್.ಡಿ.ರಾಜೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net