ಆರ್ಥಿಕ ಪ್ರಗತಿ ಸಾಧಿಸಿ

12arsph1ep,,,,,
Published on

ಅರಸೀಕೆರೆ : ಬೀದಿ ಬದಿ ವ್ಯಾಪಾರಿಗಳು ಸರ್ಕಾರದಿಂದ ದೊರೆಯವ ನೆರವನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಬಿ.ಕೆ.ರವಿಕಾಂತ್ ಹೇಳಿದರು.
ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ನಗರದ ವೆಂಕಟೇಶ್ವರ ಕಲಾ ಭವನದಲ್ಲಿ ಸೋಮವಾರ ರಾಷ್ಟ್ರೀಯ ನಗರ ಜೀವನೋಪಾಯ ಕುರಿತು ಆಯೋಜಿಸಿದ್ದ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಬೀದಿ ಬದಿಯಲ್ಲಿ ಸಣ್ಣಪುಟ್ಟ ವ್ಯಾಪಾರ ನಡೆಸುವವರನ್ನು ಗುರುತಿಸಿ ಕೇಂದ್ರ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೂಲಕ ಆರ್ಥಿಕ ನೆರವು ನೀಡುತ್ತಿದೆ. ಇದರ ಪ್ರಯೋಜನ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಸಾಲ ಪಡೆಯುವ ವಿವಿಧ ಹಂತಗಳು ಮತ್ತು ವಿವಿಧ ಕಾಯ್ದೆ, ಕಾನೂನುಗಳ ಕುರಿತು ಅವರು ವಿವರಿಸಿದರು. ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ್ ಸಾಲ ವಿತರಣೆ ಕುರಿತು ಮಾತನಾಡಿದರು. ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವ್ಯವಸ್ಥಾಪಕಿ ಎ.ಜೆ.ಕೋಮಲಾ, ಬೀದಿ ಬದಿ ವ್ಯಾಪಾರಿಗಳಿಗೆ ದೊರೆಯುವ ಸವಲತ್ತು ಮತ್ತು ಜವಾಬ್ದಾರಿಗಳ ಕುರಿತು ತಿಳಿಸಿದರು. ಪೌರಾಯುಕ್ತ ಕೃಷ್ಣಮೂರ್ತಿ, ಡಾ.ರಾಜಶೇಖರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net