

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಹಾಗೂ ಚಂದಗುಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀಬಾಯಿ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಮಾಗೋಡ ಜಲಪಾತದ ರಸ್ತೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಸ್ತೆಯಲ್ಲಿ ಸಂಚಾರ ನಿಷೇಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಂದಗುಳಿ ಗ್ರಾ.ಪಂ. ವ್ಯಾಪ್ತಿಯ ಜಂಬೆಸಾಲಿನಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿತವಾದ ಸ್ಥಳಕ್ಕೂ ಭೇಟಿ ನೀಡಿದರು. ತಹಸೀಲ್ದಾರ್ ಅಶೋಕ ಭಟ್ಟ, ಜಿ.ಪಂ. ಎಇಇ ಅಶೋಕ ಬಂಟ, ಪಿಎಸ್ಐ ಸಿದ್ದಪ್ಪ ಗುಡಿ, ಪಿಡಿಒ ರಾಜೇಶ ಶೇಟ್ ಇತರರಿದ್ದರು.