ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ 3.6 ವರ್ಷ ಸಜೆ, 50 ಲಕ್ಷ ರೂ. ದಂಡ

judge
Published on

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಆರೋಪ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 3.6 ವರ್ಷ ಸಾದಾ ಸಜೆ ಹಾಗೂ 50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.


ಆಹಾರ ಮತ್ತು ನಾಗರೀಕ ಪೂರೈಕೆ ಉಲಾಖೆ ಉಪನಿರ್ದೇಶಕರಾಗಿದ್ದ ಬಿಜೈ ನಿವಾಸಿ ರತ್ನಾಕರ ನಾಯ್ಕ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ.


ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿರುವ ಮಾಹಿತಿ ಆಧಾರದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣವನ್ನು 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಬಿ.ಬಿ. ಜಕಾತಿ ವಿಚಾರಣೆ ನಡೆಸಿ ಅಂತಿಮ ತೀರ್ಪು ಪ್ರಕಟಿಸಿದ್ದಾರೆ. ಮಂಗಳೂರಿನ ಬಿಜೈ ನಿವಾಸಿ ರತ್ನಾಕರ್ ನಾಯ್ಕಗೆ ಕಲಂ 13(1)(ಇ) ಜತೆಗೆ 13(2) ಲಂಚ ವಿರೋಧ ಕಾಯಿದೆ 1988 ಕಲಂರಂತೆ 3.6ವರ್ಷ ಸಾದಾ ಸಜೆ ಹಾಗೂ 50 ಲಕ್ಷ ರೂ. ದಂಡ ವಿಧಿಸಿದ್ದು, ಅಪರಾಧಿ ದಂಡ ಕಟ್ಟಲು ವಿಲನಾದಲ್ಲಿ ಮತ್ತೆ 6 ತಿಂಗಳ ಕಾಲ ಸಾದಾ ಸಜೆಗೆ ಆದೇಶಿಸಿ ಅಂತಿಮ ತೀರ್ಪು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net