ಅಂಗನವಾಡಿಗೆ ನ್ಯಾಯಾಧೀಶರ ಭೇಟಿ

Judge's visit to Anganwadi
Published on

ಮಡಿಕೇರಿ:

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭಾ ಇತ್ತೀಚೆಗೆ ಕೊಡಗು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿದ್ದು, ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಮಕ್ಕಳ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ. ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲಬಾರದು. ಆ ನಿಟ್ಟಿನಲ್ಲಿ ಪ್ರತಿದಿನ ಪೌಷ್ಠಿಕ ಆಹಾರವನ್ನು ನೀಡುವಂತಾಗಬೇಕು ಎಂದು ಈ ವೇಳೆ ಸೂಚಿಸಿದರು.

ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಡೆಗೋಡೆ ಇಲ್ಲದಿರುವುದು, ಸೂಕ್ತ ಕಿಟಕಿ ವ್ಯವಸ್ಥೆ ಇಲ್ಲದಿರುವುದು, ಮಕ್ಕಳಿಗೆ ಒಳಾಂಗಣ ಮತ್ತು ಹೊರಾಂಗಣ ಮೈದಾನದಲ್ಲಿ ಆಟವಾಡಲು ಸೂಕ್ತ ಸ್ಥಳದ ಅಭಾವ ಕಂಡುಬAದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕೆಲವೊಂದು ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮವಾಗಿ ಅಡುಗೆ ಕೋಣೆ ಇದ್ದು, ಶುಚಿತ್ವಕ್ಕೆ ಒತ್ತು ನೀಡುವುದು ಶ್ಲಾಘನೀಯವಾಗಿದೆ ಎಂದು ಶುಭಾ ಹೇಳಿದರು. ಅಂಗನವಾಡಿ ವ್ಯಾಪ್ತಿಯ ಗರ್ಭಿಣಿಯರು, ಬಾಣಂತಿಯರು, ಮಕ್ಕಳಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರವನ್ನು ಪೂರೈಕೆ ಮಾಡುವುದು ಕಂಡುಬAದಿದೆ ಎಂದು ತಿಳಿಸಿದರು.

ಅಪೌಷ್ಠಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವೇಣುಗೋಪಾಲ ಗೌಡ ಅವರ ನಿರ್ದೇಶನದಂತೆ ಇತ್ತೀಚೆಗೆ ಮಡಿಕೇರಿಯ ಸ್ಟೋನ್ ಹಿಲ್, ತ್ಯಾಗರಾಜ ಕಾಲೋನಿ, ಹಿಲ್‌ರಸ್ತೆ, ಕಡಗದಾಳು, ಮಾದಾಪುರ, ಕೊಳತ್ತೋಡು ಹೀಗೆ ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಾಗಿದೆ ಎಂದು ಶುಭಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net