ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

Arrest
Published on

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಗ್ರಾಪಂ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34) ಎಂಬಾತನನ್ನು ಕೊಲೆಗೈದ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರಿಂದ ಬಂಧಿತ ಆರೋಪಿ ಬಾಬು ಯಾನೆ ರುದ್ರ (68) ಎಂಬಾತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ದೀಪಕ್ ಬೆಂಗರ (34) ಡಿ.4ರಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತ ದೀಪಕ್ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕುಂಬ್ರಂಗೆ ಮನೆ ನಿವಾಸಿ ಬಾಬು ಯಾನೆ ರುದ್ರನನ್ನು ದೇರಳಕಟ್ಟೆಯಿಂದ ಬಂಧಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net