ಜೂನಿಯರ್ ಥ್ರೋಬಾಲ್ ಚಾಂಪಿಯನ್‌ಷಿಪ್

Bdk_Throwball
Published on

ಬದಿಯಡ್ಕ: ಕಾಸರಗೋಡು ಜಿಲ್ಲಾ ಥ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಜೂನಿಯರ್ ಥ್ರೋಬಾಲ್ ಚಾಂಪಿಯನ್‌ಷಿಪ್ ಇತ್ತೀಚೆಗೆ ನಡೆಯಿತು.

ಹುಡುಗರ ವಿಭಾಗದಲ್ಲಿ ಎಸ್.ಎ.ಪಿ.ಎಚ್.ಎಸ್ ಅಗಲ್ಪಾಡಿ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಪಂದ್ಯಾಟವನ್ನು ಥ್ರೋಬಾಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಸೂರ್ಯನಾರಾಯಣ ಭಟ್ ಎಡನೀರು ಉದ್ಘಾಟಿಸಿದರು.

ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದರು. ವಿದ್ಯಾಲಕ್ಷ್ಮೀ ಶುಭ ಹಾರೈಸಿದರು. ಕೆ.ಸಂತೋಷ್ ಸ್ವಾಗತಿಸಿದರು. ಶಶಿಕಾಂತ್ ಜಿ.ಆರ್ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net