

ಬ್ರಹ್ಮಾವರ: ವಾರಂಬಳ್ಳಿ ಗ್ರಾಪಂ ವ್ಯಾಪ್ತಿಯ ಮೀನು ಮಾರುಕಟ್ಟೆ ಬಳಿಯಲ್ಲಿರುವ ಘನ ಮತ್ತು ದ್ರವ ತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ರಾತ್ರಿ ಹೊತ್ತು ಬೆಂಕಿ ತಗಲಿದ ಘಟನೆಗೆ ಶನಿವಾರ ಬೆಳಗ್ಗೆ ರಾಜ್ಯ ಉಪಲೋಕಾಯುಕ್ತ ಬಿ.ವೀರಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಶಾಲಾ ಕಾಲೇಜು ನಗರ ಮದ್ಯಭಾಗವಾಗಿ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗುವ ರೀತಿಯಲ್ಲಿ ಇದ್ದ ತ್ಯಾಜ್ಯ ಘಟಕ ನಿರ್ವಹಣೆ ಕುರಿತು ಅಭಿವೃದ್ಧಿ ಅಧಿಕಾರಿ ಆದರ್ಶ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸಿದರು.
ಮಂಗಳೂರು-ಉಡುಪಿ ಲೋಕಾಯುಕ್ತ ಎಸ್.ಪಿ.ಕುಮಾರ ಚಂದ್ರ, ಮಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಡಾ.ಗಾನಾ ಪಿ.ಕುಮಾರ್, ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್‌ಪಿ ಮಂಜುನಾಥ್, ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ, ಗ್ರಾಪಂ ಕಾರ್ಯದರ್ಶಿ ಶೇಖರ ನಾಯ್ಕ, ಉಡುಪಿ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಹಾಜರಿದ್ದರು.