

ಮುಂಡರಗಿ: ಅನುದಾನಿತ ಶಾಲಾ, ಕಾಲೇಜುಗಳ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಶನಿವಾರ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಈಗಾಗಲೇ ಸರ್ಕಾರ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್.ಪಿ.ಎಸ್ ರದ್ದುಗೊಳಿ ಒಪಿಎಸ್ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಸರ್ಕಾರ ನೀಡಿರುವ ಭರವಸೆಯಂತೆ ಶೀಘ್ರದಲ್ಲಿಯೇ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸಬೇಕು. ಅನುದಾನಿತ ನೌಕರರಿಗೂ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ತಹಸೀಲ್ದಾರ್ ಪರವಾಗಿ ಗ್ರೇಡ್-2 ತಹಸೀಲ್ದಾರ್ ಕೆ.ರಾಧಾ ಮನವಿ ಸ್ವೀಕರಿಸಿದರು. ಸಂಘದ ತಾಲೂಕು ಘಟಕದ ಅಧ್ಯಕ್ಷ ಧನೇಶ ನಾಯಕ, ಅಶೋಕ ಭಜಂತ್ರಿ, ಎಂ.ಎಚ್. ನಾಯಕ, ಆರ್.ವಿ. ಅರ್ಕಸಾಲಿ, ಎಸ್.ಎ. ಮರಿಗೌಡರ, ವೈ.ಎಚ್. ವಾಲಿಕಾರ, ಪಿ.ಕೆ. ನಾಯಕ, ಎಸ್.ಡಿ. ರಾಥೋಡ, ಬಿ.ಎಸ್. ಉಗಾಡೆ. ಎ.ಎಸ್. ಪಾಟೀಲ, ಡಿ.ಜಿ. ಪೂಜಾರ, ಮಂಜುನಾಥ ತೆಗ್ಗಿನಮನಿ, ಶಿವಕುಮಾರ ಗಿಂಡಿಮಠ, ಧನೇಶ ಲಮಾಣಿ, ಎಸ್.ಸಿ. ಚಕ್ಕಡಿಮಠ, ಎಸ್.ಎನ್. ಕಲ್ಲಿಗನೂರ, ದೇವರೆಡ್ಡಿ ಇಮ್ರಾಪುರ ಇದ್ದರು.