ಸುರಕ್ಷಿತ ಕ್ಷೇತ್ರಕ್ಕಾಗಿ ಕಾಂಗ್ರೆಸ್​ ನಾಯಕರ ತಲಾಷೆ: BJP ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಗೇಲಿ

K Annamalai
Published on

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಮುಂಚೂಣಿ ನಾಯಕರು ಸುರಕ್ಷಿತ ಕ್ಷೇತ್ರಗಳ ತಲಾಷೆಯಲ್ಲಿದ್ದಾರೆ. ಇನ್ನೂ ಆ ಪಕ್ಷದ ಅಧಿಕಾರಕ್ಕೆ ಬರುವುದು ಎಲ್ಲಿಂದ ಬಂತು ಎಂದು ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಗೇಲಿ ಮಾಡಿದರು.

ಗೆದ್ದರೆ ಸಾಕಪ್ಪಾ

ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಒಂದು ಕಡೆ ಸೋತು, ಮತ್ತೊಂದು ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಿಂದ ಗೆದ್ದರು. ಇದರಿಂದಾಗಿ ಈ ಬಾರಿಯೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಅದೇ ಹಾದಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರು ಹೆಜ್ಜೆಯಿಟ್ಡಿದ್ದಾರೆ. ಒಂದಂತೂ ಸತ್ಯ ಬಿಜೆಪಿಯನ್ನೇ ಮತ್ತೆ ಅಧಿಕಾರಕ್ಕೆ ತರಲು ಜನ ನಿರ್ಧರಿಸಿಯಾಗಿದೆ. ಇದು ಗೊತ್ತಾಗಿರುವ ಕಾರಣಕ್ಕೆ ಚುನಾವಣೆಯಲ್ಲಿ ಗೆದ್ದರೆ ಸಾಕಪ್ಪಾ ಎಂದು ಸುರಕ್ಷಿತ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದಾರೆ ಎಂದು ಅಣ್ಣಾಮಲೈ ಛೇಡಿಸಿದರು.

ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತಬಾಗಿರುವ ಕಾರಣ ಸ್ಪರ್ಧೆಗೆ ಪೈಪೋಟಿ ಏರ್ಪಟ್ಟಿದೆ. ಅಸಮಾಧಾನಿತ ಎಲ್ಲರನ್ನೂ ಹಿರಿಯ ನಾಯಕರು ಸಮಾಧಾನ ಮಾಡಲಿದ್ದಾರೆ. ಮೂರನೇ ಪಟ್ಟಿ ಆದಷ್ಟು ಶೀಘ್ರವೇ ಪ್ರಕಟವಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net